Add parallel Print Page Options

ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ. ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’

“ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.

ಆರ್‌ನಲ್ಲಿ ಇಸ್ರೇಲರು

“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”

Read full chapter