Add parallel Print Page Options

ನಿಜವಾದ ಕಾಣಿಕೆ

(ಮಾರ್ಕ 12:41-44)

21 ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು. ಅಷ್ಟರಲ್ಲಿ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕನಾಣ್ಯಗಳನ್ನು ಪೆಟ್ಟಿಗೆಯಲ್ಲಿ[a] ಹಾಕಿದಳು. ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಈ ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಆ ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು. ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.

Read full chapter

Footnotes

  1. 21:2 ಹಣದ ಪೆಟ್ಟಿಗೆ ಜನರು ತಮ್ಮ ಕಾಣಿಕೆಗಳನ್ನು ದೇವರಿಗೆ ಸಮರ್ಪಿಸುವುದಕ್ಕೆ ಯೆಹೂದ್ಯರ ಆರಾಧನೆಯ ಸ್ಥಳದಲ್ಲಿ ಇಡಲ್ಪಟ್ಟ ವಿಶೇಷ ಪೆಟ್ಟಿಗೆ.