Add parallel Print Page Options

14 “ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು. 15 ಮಾಳಿಗೆಯ ಮೇಲಿರುವವನು ಕೆಳಗಿಳಿದು ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ. 16 ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳಲು ಹಿಂತಿರುಗದಿರಲಿ.

17 “ಆ ಸಮಯವು ಗರ್ಭಿಣಿ ಸ್ತ್ರೀಯರಿಗೆ ಹಾಗೂ ಎಳೆಕೂಸುಗಳನ್ನು ಹೊಂದಿರುವ ತಾಯಂದಿರಿಗೆ ಬಹಳ ಸಂಕಟಕರವಾಗಿರುತ್ತದೆ. 18 ಈ ಸಂಗತಿಗಳು ಚಳಿಗಾಲದಲ್ಲಿ ನಡೆಯದಂತೆ ಪ್ರಾರ್ಥನೆ ಮಾಡಿರಿ. 19 ಏಕೆಂದರೆ ಆ ದಿನಗಳು ಬಹಳ ಸಂಕಟದಿಂದ ತುಂಬಿರುತ್ತವೆ. ದೇವರು ಈ ಲೋಕವನ್ನು ಸೃಷ್ಟಿಮಾಡಿದಂದಿನಿಂದ ಅಂಥ ಸಂಕಟ ಇದುವರೆಗೂ ಆಗಿಲ್ಲ, ಇನ್ನು ಮುಂದೆಯೂ ಆಗುವುದಿಲ್ಲ.

Read full chapter