ಧರ್ಮೋಪದೇಶಕಾಂಡ 2:4-9
Kannada Holy Bible: Easy-to-Read Version
4 ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. 5 ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ. 6 ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು. 7 ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’
8 “ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.
ಆರ್ನಲ್ಲಿ ಇಸ್ರೇಲರು
9 “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”
Read full chapterKannada Holy Bible: Easy-to-Read Version. All rights reserved. © 1997 Bible League International