Add parallel Print Page Options

ನಂಬಲೊಲ್ಲದ ಜನರಿಗೆ ಯೇಸುವಿನ ಎಚ್ಚರಿಕೆ

(ಮತ್ತಾಯ 11:20-24)

13 “ಕೊರಾಜಿನೇ, ಬೆತ್ಸಾಯಿದವೇ,[a] ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು. 14 ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು. 15 ಕಪೆರ್ನೌಮೇ,[b] ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!

Read full chapter

Footnotes

  1. 10:13 ಕೊರಾಜಿನ್, ಬೆತ್ಸಾಯಿದ ಗಲಿಲಾಯ ಸರೋವರದ ಬಳಿ ಇದ್ದ ಪಟ್ಟಣಗಳು. ಯೇಸು ಇಲ್ಲಿ ಜನರಿಗೆ ಬೋಧಿಸಿದನು.
  2. 10:15 ಕಪೆರ್ನೌಮ್ ಗಲಿಲಾಯ ಪ್ರಾಂತ್ಯದ ಒಂದು ಊರು. ಯೇಸು ಇಲ್ಲಿ ಜನರಿಗೆ ಬೋಧಿಸಿದನು.