Add parallel Print Page Options

ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು. ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.

ದೇವರಿಗೆ ಮಾತ್ರ ಭಯಪಡಿರಿ

(ಮತ್ತಾಯ 10:28-31)

ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.

“ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತುಬಿಡುವುದಿಲ್ಲ. ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

Read full chapter