Add parallel Print Page Options

25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು. 26 ಆಗ ನೀವು, ‘ನಾವು ನಿನ್ನೊಡನೆ ಊಟಮಾಡಿದೆವು, ಪಾನಮಾಡಿದೆವು. ನೀನು ನಮ್ಮ ಬೀದಿಗಳಲ್ಲಿ ನಮಗೆ ಉಪದೇಶಿಸಿದೆ’ ಎಂದು ಹೇಳುವಿರಿ. 27 ಆಗ ಅವನು ನಿಮಗೆ, ‘ನೀವು ಯಾರೋ ನನಗೆ ಗೊತ್ತಿಲ್ಲ! ನೀವು ಎಲ್ಲಿಯವರು? ಇಲ್ಲಿಂದ ಹೊರಟುಹೋಗಿ! ನೀವೆಲ್ಲರೂ ಪಾಪಕೃತ್ಯಗಳನ್ನು ಮಾಡುವ ಜನರು!’ ಎಂದು ನಿಮಗೆ ಹೇಳುವನು.

Read full chapter