ಲೂಕ 21:12-17
Kannada Holy Bible: Easy-to-Read Version
12 “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು. 13 ಆದರೆ ನನ್ನ ಕುರಿತು ಹೇಳುವುದಕ್ಕೆ ನಿಮಗೆ ಅದು ಸುಸಂದರ್ಭವಾಗಿರುವುದು. 14 ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ. 15 ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ. 16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು. 17 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.
Read full chapterKannada Holy Bible: Easy-to-Read Version. All rights reserved. © 1997 Bible League International