Add parallel Print Page Options

15 ಯೇಸು ಅವರಿಗೆ, “ನಾನು ಸಾಯುವ ಮೊದಲು ಈ ಪಸ್ಕದ ಊಟ ಮಾಡಲು ಬಹಳವಾಗಿ ಅಪೇಕ್ಷಿಸಿದ್ದೇನೆ. 16 ಇದರ ನಿಜವಾದ ಅರ್ಥವು ದೇವರ ರಾಜ್ಯದಲ್ಲಿ ನೆರವೇರುವ ತನಕ, ನಾನೆಂದಿಗೂ ಇನ್ನೊಂದು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಅಂದನು.

17 ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ. 18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.

19 ಆಮೇಲೆ ಯೇಸು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡನು. ಆತನು ರೊಟ್ಟಿಗಾಗಿ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ಅಪೊಸ್ತಲರಿಗೆ ಕೊಟ್ಟನು. ಬಳಿಕ ಯೇಸು, “ನಾನು ನಿಮಗೋಸ್ಕರ ಕೊಡುತ್ತಿರುವ ನನ್ನ ದೇಹವಿದು. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಅಂದನು. 20 ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.

Read full chapter