Font Size
ಲೂಕ 23:44-49
Kannada Holy Bible: Easy-to-Read Version
ಲೂಕ 23:44-49
Kannada Holy Bible: Easy-to-Read Version
ಯೇಸುವಿನ ಮರಣ
(ಮತ್ತಾಯ 27:45-56; ಮಾರ್ಕ 15:33-41; ಯೋಹಾನ 19:28-30)
44 ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು. 45 ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು. 46 ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ”[a] ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
47 ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.
48 ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು. 49 ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.
Read full chapterFootnotes
- 23:46 ತಂದೆಯೇ … ಒಪ್ಪಿಸುತ್ತೇನೆ ಅಕ್ಷರಶಃ, “ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ.” ಉಲ್ಲೇಖನ: ಕೀರ್ತನೆ 31:5.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International