ಲೂಕ 6:32-36
Kannada Holy Bible: Easy-to-Read Version
32 “ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ! 33 ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ! 34 ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!
35 “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ. 36 ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ.
Read full chapterKannada Holy Bible: Easy-to-Read Version. All rights reserved. © 1997 Bible League International