ಮಾರ್ಕ 14:55-64
Kannada Holy Bible: Easy-to-Read Version
55 ಮಹಾಯಾಜಕರು ಹಾಗೂ ಹಿರಿಯ ಸಭೆಯವರೆಲ್ಲರು ಆತನನ್ನು ಕೊಲ್ಲಲು ಬೇಕಾದ ಒಂದು ತಪ್ಪನ್ನು ಆತನಲ್ಲಿ ಕಂಡುಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೆ ಯೇಸುವನ್ನು ಕೊಲ್ಲಲು ಸರಿಯಾದ ಯಾವುದೇ ಆಧಾರವನ್ನು ಕಂಡುಹಿಡಿಯಲು ಸಮಿತಿಗೆ ಸಾಧ್ಯವಾಗಲಿಲ್ಲ. 56 ಅನೇಕ ಜನರು ಬಂದು, ಯೇಸುವಿನ ವಿರುದ್ಧ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಅವರೆಲ್ಲರು ಒಂದಕ್ಕೊಂದು ಹೊಂದಾಣಿಕೆಯಾಗದಂತಹ ಬೇರೆಬೇರೆ ಸಂಗತಿಗಳನ್ನು ಹೇಳಿದರು.
57 ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ, 58 “ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು. 59 ಆದರೂ ಜನರು ಹೇಳಿದ ಈ ಸಂಗತಿಗಳು ಹೊಂದಿಕೆಯಾಗಲಿಲ್ಲ.
60 ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು. 61 ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ.
ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.
62 ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.[a]
63 ಪ್ರಧಾನಯಾಜಕನು ಬಹಳ ಕೋಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಮಗೆ ಇನ್ನೂ ಹೆಚ್ಚಿನ ಸಾಕ್ಷಿಗಳ ಅವಶ್ಯಕತೆಯಿಲ್ಲ. 64 ಇವನು ದೇವರ ವಿರುದ್ಧವಾಗಿ ಹೇಳಿದ ಮಾತನ್ನು ನೀವೆಲ್ಲರೂ ಕೇಳಿದ್ದೀರಿ. ನಿಮ್ಮ ಅಭಿಪ್ರಾಯವೇನು?” ಎಂದು ಕೇಳಿದನು.
ಯೇಸು ಅಪರಾಧಿಯೆಂತಲೂ ಆತನಿಗೆ ಮರಣದಂಡನೆ ಆಗಬೇಕೆಂತಲೂ ಜನರೆಲ್ಲರು ಹೇಳಿದರು.
Read full chapterFootnotes
- 14:62 ನೋಡಿರಿ: ಕೀರ್ತನೆ 110:1; ದಾನಿ. 7:13.
Kannada Holy Bible: Easy-to-Read Version. All rights reserved. © 1997 Bible League International