Add parallel Print Page Options

ಕೆಲವು ಯೆಹೂದ್ಯರು ಯೇಸುವಿನ ಕುರಿತು ಮಾಡಿದ ಟೀಕೆ

(ಮತ್ತಾಯ 12:1-8; ಲೂಕ 6:1-5)

23 ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು. 24 ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.

25 ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.[a] 26 ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.

27 ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ. 28 ಆದ್ದರಿಂದ ಮನುಷ್ಯಕುಮಾರನು ಸಬ್ಬತ್‌ದಿನಕ್ಕೂ ಉಳಿದೆಲ್ಲ ದಿನಗಳಿಗೂ ಪ್ರಭುವಾಗಿದ್ದಾನೆ” ಎಂದು ಹೇಳಿದನು.

Read full chapter

Footnotes

  1. 2:25 ನೋಡಿರಿ: 1 ಸಮು. 21:1-6.