Add parallel Print Page Options

ಯೇಸುವನ್ನು ಪರೀಕ್ಷಿಸಲು ಯೆಹೂದ್ಯ ನಾಯಕರ ಪ್ರಯತ್ನ

(ಮಾರ್ಕ 8:11-13; ಲೂಕ 12:54-56)

16 ಫರಿಸಾಯರು ಮತ್ತು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವನ್ನು ಪರೀಕ್ಷಿಸಲು, “ನೀನು ದೇವರಿಂದ ಬಂದವನೆಂಬುದನ್ನು ನಿರೂಪಿಸಲು ಒಂದು ಅದ್ಭುತಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ. ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ. ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ[a] ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.

Read full chapter

Footnotes

  1. 16:4 ಯೋನನಲ್ಲಾದ ಸೂಚಕಕಾರ್ಯ ಯೋನನು ಮೂರು ದಿನಗಳ ಕಾಲ ಒಂದು ದೊಡ್ಡ ಮೀನಿನಲ್ಲಿದ್ದುದು ಯೇಸು ಮೂರು ದಿನ ಸಮಾಧಿಯಲ್ಲಿದ್ದಂತೆ.