Add parallel Print Page Options

ಯೇಸುವೇ ಕ್ರಿಸ್ತನೆಂದು ಪೇತ್ರನ ಪ್ರಕಟನೆ

(ಮಾರ್ಕ 8:27-30; ಲೂಕ 9:18-21)

13 ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

14 ಶಿಷ್ಯರು, “ಕೆಲವರು ‘ಸ್ನಾನಿಕ ಯೋಹಾನ’ನೆಂದು ಹೇಳುತ್ತಾರೆ. ಇನ್ನು ಕೆಲವರು ‘ಎಲೀಯ’ನೆಂದು ಹೇಳುತ್ತಾರೆ. ಮತ್ತೆ ಕೆಲವರು ‘ಯೆರೆಮೀಯ’ನೆಂದು ಇಲ್ಲವೆ ‘ಪ್ರವಾದಿಗಳಲ್ಲಿ ಒಬ್ಬ’ನೆಂದು ಹೇಳುತ್ತಾರೆ” ಎಂದು ಉತ್ತರಕೊಟ್ಟರು.

15 ಅದಕ್ಕೆ ಆತನು, “ನೀವು ನನ್ನನ್ನು ಯಾರೆಂದು ಹೇಳುತ್ತೀರಿ?” ಎಂದು ಕೇಳಿದನು.

16 ಸೀಮೋನ್ ಪೇತ್ರನು, “ನೀನೇ ಬರಬೇಕಾಗಿರುವ ಕ್ರಿಸ್ತನು. ನೀನೇ ಜೀವಸ್ವರೂಪನಾದ ದೇವರ ಮಗನು” ಎಂದು ಉತ್ತರಕೊಟ್ಟನು.

17 ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು. 18 ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ.[a] ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು. 19 ಪರಲೋಕರಾಜ್ಯದ ಬೀಗದ ಕೈಗಳನ್ನು ನಾನು ನಿನಗೆ ಕೊಡುತ್ತೇನೆ. ನೀನು ಭೂಲೋಕದಲ್ಲಿ ನೀಡುವ ನ್ಯಾಯತೀರ್ಪು ದೇವರ ನ್ಯಾಯತೀರ್ಪಾಗಿರುತ್ತದೆ. ನೀನು ಭೂಲೋಕದಲ್ಲಿ ನೀಡುವ ಕ್ಷಮೆಯು ದೇವರ ಕ್ಷಮೆಯಾಗಿರುತ್ತದೆ” ಎಂದು ಉತ್ತರಿಸಿದನು.

Read full chapter

Footnotes

  1. 16:18 ಪೇತ್ರ ಅಂದರೆ “ಬಂಡೆ.” ಇದು ಪದ ಬಳಕೆಯ “ಶ್ಲೇಚ್ಛೆಯಾಗಿದೆ.”