Add parallel Print Page Options

19 ಆಗ ಧರ್ಮೋಪದೇಶಕನು ಯೇಸುವಿನ ಬಳಿಗೆ ಬಂದು, “ಬೋಧಕನೇ, ನೀನು ಯಾವ ಸ್ಥಳಕ್ಕೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದನು.

20 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.

21 ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು.

22 ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಿಕೊಳ್ಳಲಿ. ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

Read full chapter