Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಅರಣ್ಯಕಾಂಡ 26-27

ಜನರು ಲೆಕ್ಕಿಸಲ್ಪಟ್ಟದ್ದು

26 ಆ ಘೋರ ವ್ಯಾಧಿ ನಿಂತಮೇಲೆ ಯೆಹೋವನು ಮೋಶೆಗೂ ಯಾಜಕ ಆರೋನನ ಮಗನಾದ ಎಲ್ಲಾಜಾರನಿಗೂ, “ನೀವು ಇಸ್ರೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸುಳ್ಳವರನ್ನು ಮತ್ತು ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾಗಿರುವ ಗಂಡಸರನ್ನು ಕುಟುಂಬ ಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.

ಈ ಸಮಯದಲ್ಲಿ ಜನರು ಮೋವಾಬಿನ ಬಯಲುಗಳಲ್ಲಿ ತಂಗಿದ್ದರು. ಇದು ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ಸಮೀಪದಲ್ಲಿತ್ತು. ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಜನರೊಡನೆ ಮಾತಾಡಿ ಹೇಳಿದ್ದೇನೆಂದರೆ: “ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”

ರೂಬೇನ್ ಕುಲದ ಜನರು: (ರೂಬೇನನು ಇಸ್ರೇಲನ ಚೊಚ್ಚಲ ಮಗನು.)

ಹನೋಕನ ಕುಟುಂಬದವರಾದ ಹನೋಕ್ಯರು;

ಪಲ್ಲೂವಿನ ಕುಟುಂಬದವರಾದ ಪಲ್ಲೂವಿನವರು;

ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು;

ಕರ್ಮೀಯ ಕುಟುಂಬದವರಾದ ಕರ್ಮೀಯರು.

ರೂಬೇನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 43,730.

ಪಲ್ಲೂವಿನ ಮಗನು ಎಲೀಯಾಬ್. ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್. 10 ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು. 11 ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

12 ಸಿಮೆಯೋನ್ ಕುಲದ ಕುಟುಂಬಗಳು:

ನೆಮೂವೇಲನ ಕುಟುಂಬದವರಾದ ನೆಮೂವೇಲ್ಯರು;

ಯಾಮೀನನ ಕುಟುಂಬದವರಾದ ಯಾಮೀನ್ಯರು;

ಯಾಕೀನನ ಕುಟುಂಬದವರಾದ ಯಾಕೀನ್ಯರು;

13 ಜೆರಹನ ಕುಟುಂಬದವರಾದ ಜೆರಹಿಯರು;

ಸೌಲನ ಕುಟುಂಬದವರಾದ ಸೌಲ್ಯರು.

14 ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 22,200.

15 ಗಾದ್ ಕುಲದ ಕುಟುಂಬಗಳು:

ಚೆಫೋನನ ಕುಟುಂಬದವರಾದ ಚೆಫೋನ್ಯರು;

ಹಗ್ಗೀಯನ ಕುಟುಂಬದವರಾದ ಹಗ್ಗೀಯರು;

ಶೂನೀಯ ಕುಟುಂಬದವರಾದ ಶೂನೀಯರು;

16 ಒಜ್ನೀಯ ಕುಟುಂಬದವರಾದ ಒಜ್ನೀಯರು;

ಏರೀಯ ಕುಟುಂಬದವರಾದ ಏರೀಯರು;

17 ಅರೋದನ ಕುಟುಂಬದವರಾದ ಆರೋದ್ಯರು;

ಅರೇಲೀಯ ಕುಟುಂಬದವರಾದ ಅರೇಲೀಯರು.

18 ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 40,500.

19-20 ಯೆಹೂದ ಕುಲದ ಕುಟುಂಬಗಳು:

ಶೇಲಹನ ಕುಟುಂಬದವರಾದ ಶೇಲಾನ್ಯರು;

ಪೆರೆಚನ ಕುಟುಂಬದವರಾದ ಪೆರೆಚ್ಯರು;

ಜೆರಹನ ಕುಟುಂಬದವರಾದ ಜೆರಹಿಯರು.

(ಯೆಹೂದನ ಇಬ್ಬರು ಗಂಡುಮಕ್ಕಳಾದ ಏರ್ ಮತ್ತು ಓನಾನನು ಕಾನಾನ್‌ನಲ್ಲಿ ಸತ್ತರು.)

21 ಪೆರೆಚನ ಕುಟುಂಬಗಳು:

ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು,

ಹಾಮೂಲನ ಕುಟುಂಬದವರಾದ ಹಾಮೂಲ್ಯರು;

22 ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 76,500.

23 ಇಸ್ಸಾಕಾರನ ಕುಟುಂಬಗಳು:

ತೋಲನ ಕುಟುಂಬದವರಾದ ತೋಲಾಯರು;

ಪುವ್ವನ ಕುಟುಂಬದವರಾದ ಪೂನ್ಯರು;

24 ಯಾಶೂಬನ ಕುಟುಂಬದವರಾದ ಯಾಶೂಬ್ಯರು;

ಶಿಮ್ರೋನನ ಕುಟುಂಬದವರಾದ ಶಿಮ್ರೋನ್ಯರು.

25 ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 64,300 ಮಂದಿ.

26 ಜೆಬುಲೂನ್ ಕುಲದ ಕುಟುಂಬಗಳು:

ಸೆರೆದನ ಕುಟುಂಬದವರಾದ ಸೆರೆದ್ಯರು;

ಏಲೋನನ ಕುಟುಂಬದವರಾದ ಏಲೋನ್ಯರು;

ಯಹಲೇಲನ ಕುಟುಂಬದವರಾದ ಯಹಲೇಲ್ಯರು.

27 ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 60,500.

28 ಯೋಸೇಫನ ಇಬ್ಬರು ಗಂಡುಮಕ್ಕಳು: ಮನಸ್ಸೆ ಮತ್ತು ಎಫ್ರಾಯೀಮ್. 29 ಮನಸ್ಸೆ ಕುಲದ ಕುಟುಂಬಗಳು:

ಮಾಕೀರನ ಕುಟುಂಬದವರಾದ ಮಾಕೀರ್ಯರು;

ಮಾಕೀರನ ಮಗನಾದ ಗಿಲ್ಯಾದನ ಕುಟುಂಬದವರಾದ ಗಿಲ್ಯಾದ್ಯರು.

30 ಗಿಲ್ಯಾದನ ಕುಟುಂಬದವರು:

ಈಯೆಜೆರನ ಕುಟುಂಬದವರಾದ ಈಯೆಜೆರ್ಯರು;

ಹೇಲೆಕನ ಕುಟುಂಬದವರಾದ ಹೇಲೆಕ್ಯರು;

31 ಅಸ್ರೀಯೇಲನ ಕುಟುಂಬದವರಾದ ಅಸ್ರೀಯೇಲ್ಯರು;

ಶೆಕೆಮನ ಕುಟುಂಬದವರಾದ ಶೆಕೆಮ್ಯರು;

32 ಶೆಮೀದಾಯನ ಕುಟುಂಬದವರಾದ ಶೆಮೀದಾಯರು;

ಹೇಫೆರನ ಕುಟುಂಬದವರಾದ ಹೇಫೆರ್ಯರು.

33 ಹೇಫೆರನ ಮಗನಾದ ಚಲ್ಫಹಾದನಿಗೆ ಹೆಣ್ಣುಮಕ್ಕಳು ಮಾತ್ರ ಹುಟ್ಟಿದರು. ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳ ಹೆಸರು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.

34 ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 52,700.

35 ಎಫ್ರಾಯೀಮ್ ಕುಲದ ಕುಟುಂಬಗಳು:

ಶೂತೆಲಹನ ಕುಟುಂಬದವರಾದ ಶೂತೆಲಹ್ಯರು;

ಬೆಕೆರನ ಕುಟುಂಬದವರಾದ ಬೆಕೆರ್ಯರು;

ತಹನನ ಕುಟುಂಬದವರಾದ ತಹನಿಯರು.

36 ಏರಾನನು ಶೂತೆಲಹನ ಕುಟುಂಬದವನು;

ಏರಾನನ ಕುಟುಂಬದವರಾದ ಏರಾನ್ಯರು.

37 ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟ ಗಂಡಸರ ಒಟ್ಟು ಸಂಖ್ಯೆ 32,500.

ಇದೇ ಯೋಸೇಫನ ಕುಲದ ಕುಟುಂಬಗಳ ವಿವರ.

38 ಬೆನ್ಯಾಮೀನ್ ಕುಲದ ಕುಟುಂಬಗಳು:

ಬೆಲಗನ ಕುಟುಂಬದವರಾದ ಬೆಲಗ್ಯರು;

ಅಷ್ಬೇಲನ ಕುಟುಂಬದವರಾದ ಅಷ್ಬೇಲ್ಯರು;

ಅಹೀರಾಮನ ಕುಟುಂಬದವರಾದ ಅಹೀರಾಮ್ಯರು;

39 ಶೂಫಾಮನ ಕುಟುಂಬದವರಾದ ಶೂಫಾಮ್ಯರು;

ಹೂಫಾಮನ ಕುಟುಂಬದವರಾದ ಹೂಫಾಮ್ಯರು.

40 ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು. ಬೆಲಗನ ಕುಟುಂಬಗಳು:

ಅರ್ದನ ಕುಟುಂಬದವರಾದ ಅರ್ದ್ಯರು;

ನಾಮಾನನ ಕುಟುಂಬದವರಾದ ನಾಮಾನ್ಯರು.

41 ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 45,600.

42 ದಾನ್ ಕುಲದ ಕುಟುಂಬಗಳು:

ಶೂಹಾಮನ ಕುಟುಂಬದವರಾದ ಶೂಹಾಮ್ಯರು.

43 ದಾನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 64,400.

44 ಆಶೇರ್ ಕುಲದ ಕುಟುಂಬಗಳು:

ಇಮ್ನಾಹನ ಕುಟುಂಬದವರಾದ ಇಮ್ನಾಹ್ಯರು;

ಇಷ್ವೀಯ ಕುಟುಂಬದವರಾದ ಇಷ್ವೀಯರು;

ಬೆರೀಯನ ಕುಟುಂಬದವರಾದ ಬೆರೀಯರು;

45 ಬೆರೀಯನ ಮಕ್ಕಳ ಕುಟುಂಬಗಳು:

ಹೇಬೆರನ ಕುಟುಂಬದವರಾದ ಹೇಬೆರ್ಯರು;

ಮಲ್ಕೀಯೇಲನ ಕುಟುಂಬದವರಾದ ಮಲ್ಕೀಯೇಲ್ಯರು.

46 (ಆಶೇರನಿಗೆ ಸೆರಹ ಎಂಬ ಮಗಳೂ ಇದ್ದಳು.) 47 ಆಶೇರನ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 53,400.

48 ನಫ್ತಾಲಿಯ ಕುಲದ ಕುಟುಂಬಗಳು:

ಯಹಚೇಲನ ಕುಟುಂಬದವರಾದ ಯಹಚೇಲ್ಯರು;

ಗೂನೀಯ ಕುಟುಂಬದವರಾದ ಗೂನೀಯರು;

49 ಯೇಚೆರನ ಕುಟುಂಬದವರಾದ ಯೇಚೆರ್ಯರು;

ಶಿಲ್ಲೇಮನ ಕುಟುಂಬದವರಾದ ಶಿಲ್ಲೇಮ್ಯರು.

50 ನಫ್ತಾಲಿಯ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 45,400.

51 ಹೀಗೆ ಇಸ್ರೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,01,730.

52 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: 53 “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಹಂಚಿಕೊಡಬೇಕು. 54 ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು. 55 ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವಾಸ್ತ್ಯವನ್ನು ಗೊತ್ತುಮಾಡಬೇಕು. 56 ಕುಲವು ದೊಡ್ಡದಾಗಿರಲಿ ಚಿಕ್ಕದಾಗಿರಲಿ ಚೀಟುಬಂದ ಪ್ರಕಾರವೇ ಸ್ವಾಸ್ತ್ಯವನ್ನು ಗೊತ್ತುಪಡಿಸಬೇಕು.”

57 ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು:

ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು;

ಕೆಹಾತನ ಕುಟುಂಬದವರಾದ ಕೆಹಾತ್ಯರು;

ಮೆರಾರೀಯ ಕುಟುಂಬದವರಾದ ಮೆರಾರೀಯರು.

58 ಲೇವಿ ಕುಲದವರ ಕುಟುಂಬಗಳು:

ಲಿಬ್ನೀಯರ ಕುಟುಂಬ,

ಹೆಬ್ರೋನ್ಯರ ಕುಟುಂಬ,

ಮಹ್ಲೀಯರ ಕುಟುಂಬ,

ಮೂಷೀಯರ ಕುಟುಂಬ,

ಕೋರಹಿಯರ ಕುಟುಂಬ.

59 ಅಮ್ರಾಮನು ಕೆಹಾತನ ಕುಲಕ್ಕೆ ಸೇರಿದವನು. ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಅವಳು ಲೇವಿ ಕುಟುಂಬದವಳು. ಅವಳು ಈಜಿಪ್ಟಿನಲ್ಲಿ ಹುಟ್ಟಿದಳು. ಅಮ್ರಾಮ್ ಮತ್ತು ಯೋಕೆಬೆದಳಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು. ಅವರು ಯಾರೆಂದರೆ ಆರೋನ ಮತ್ತು ಮೋಶೆ. ಅವರಿಗೆ ಒಬ್ಬ ಮಗಳೂ ಇದ್ದಳು. ಅವಳ ಹೆಸರು ಮಿರ್ಯಾಮಳು.

60 ಆರೋನನು ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಇವರ ತಂದೆ. 61 ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.

62 ಲೇವಿ ಕುಟುಂಬಗಳಲ್ಲಿ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸಾದ ಪುರುಷರ ಒಟ್ಟು ಸಂಖ್ಯೆ 23,000. ಆದರೆ ಈ ಜನರು ಇತರ ಇಸ್ರೇಲರೊಡನೆ ಲೆಕ್ಕಿಸಲ್ಪಡಲಿಲ್ಲ. ಯೆಹೋವನು ಬೇರೆ ಇಸ್ರೇಲರಿಗೆ ಕೊಟ್ಟ ಸ್ವಾಸ್ತ್ಯದಲ್ಲಿ ಅವರಿಗೆ ಪಾಲು ಸಿಕ್ಕಲಿಲ್ಲ.

63 ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು. 64 ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರೇಲರ ಸಂಖ್ಯೆಯನ್ನು ನೋಡಿದಾಗ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ. 65 ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಚಲ್ಪಹಾದನ ಹೆಣ್ಣುಮಕ್ಕಳು

27 ಚಲ್ಪಹಾದನು ಹೇಫೆರನ ಮಗನು. ಹೇಫೆರನು ಗಿಲ್ಯಾದನ ಮಗನು. ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಮನಸ್ಸೆಯು ಯೋಸೇಫನ ಮಗನು. ಚಲ್ಪಹಾದನಿಗೆ ಐದುಮಂದಿ ಹೆಣ್ಣುಮಕ್ಕಳಿದ್ದರು. ಅವರು ಯಾರೆಂದರೆ: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ. ಈ ಐದುಮಂದಿ ಸ್ತ್ರೀಯರು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಹೋಗಿ ಮೋಶೆಯ, ಮಹಾಯಾಜಕನಾದ ಎಲ್ಲಾಜಾರನ, ನಾಯಕರ ಮತ್ತು ಎಲ್ಲಾ ಇಸ್ರೇಲರ ಮುಂದೆ ನಿಂತರು.

ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ. ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರದಿಂದ ಅವನ ಹೆಸರನ್ನು ಅವನ ಕುಲದವರ ಮಧ್ಯದಿಂದ ತೆಗೆಯುವುದು ನ್ಯಾಯವೋ? ನಮ್ಮ ತಂದೆಯ ಸಂಬಂಧಿಕರೊಡನೆ ನಮಗೂ ಸ್ವಾಸ್ತ್ಯವನ್ನು ಕೊಡು” ಎಂದು ಹೇಳಿದರು.

ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ, ಯೆಹೋವನು ಅವನಿಗೆ ಹೇಳಿದ್ದೇನೆಂದರೆ: “ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.

“ಮತ್ತು ನೀನು ಇಸ್ರೇಲರಿಗೆ ಹೀಗೆ ಅಪ್ಪಣೆ ಕೊಡಬೇಕು: ‘ಒಬ್ಬ ಮನುಷ್ಯನು ಮಗನಿಲ್ಲದೆ ಸತ್ತರೆ, ನೀವು ಅವನ ಸ್ವಾಸ್ತ್ಯವನ್ನು ಅವನ ಮಗಳಿಗೆ ವರ್ಗಾವಣೆ ಮಾಡಬೇಕು. 9-10 ಮಗಳು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ಅಣ್ಣತಮ್ಮಂದಿರಿಗೆ ಕೊಡಬೇಕು. ಅಣ್ಣತಮ್ಮಂದಿರು ಇಲ್ಲದ ಪಕ್ಷಕ್ಕೆ ಅವನ ಸ್ವಾಸ್ತ್ಯವನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. 11 ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನು ಬದ್ಧವಾದ ವಿಧಿಯಾಗಿದೆ.’”

ಯೆಹೋಶುವನು ನೂತನ ನಾಯಕ

12 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು. 13 ಆ ದೇಶವನ್ನು ನೋಡಿದ ನಂತರ ನಿನ್ನ ಅಣ್ಣನಾದ ಆರೋನನಂತೆ ನೀನೂ ಸಾಯುವೆ. 14 ಇಸ್ರೇಲರ ಸಮೂಹದವರು ಚಿನ್ ಮರುಭೂಮಿಯಲ್ಲಿ ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಪವಿತ್ರತೆಯನ್ನು ಜನರ ಮುಂದೆ ತೋರಿಸದೆ ನನ್ನ ಆಜ್ಞೆಗೆ ಅವಿಧೇಯರಾದ ಕಾರಣ ಆ ದೇಶವನ್ನು ನೀನು ಸೇರಬಾರದು.” ಚಿನ್ ಮರುಭೂಮಿಯಲ್ಲಿ ಕಾದೇಶಿನ ಬಳಿ ಮೆರೀಬಾ ಬುಗ್ಗೆಯ ಕುರಿತಾಗಿ ಯೆಹೋವನು ಇದನ್ನು ಹೇಳಿದನು.

15 ಆಗ ಮೋಶೆಯು ಯೆಹೋವನಿಗೆ, 16 “ಎಲ್ಲಾ ಮನುಷ್ಯರ ಯೋಚನೆಗಳನ್ನು ತಿಳಿದಿರುವ ದೇವರಾದ ಯೆಹೋವನು ಈ ಸಮೂಹಕ್ಕೆ ಒಬ್ಬ ನಾಯಕನನ್ನು ನೇಮಿಸಲಿ. 17 ಅವನು ಅವರನ್ನು ಯುದ್ಧದಲ್ಲಿ ಮುನ್ನಡೆಸುವವನೂ ಸೈನ್ಯದ ಯೋಜನೆಗಳನ್ನು ರೂಪಿಸುವವನೂ ಆಗಿರಲಿ. ಆಗ ಯೆಹೋವನ ಸಮೂಹವು ಕುರುಬನಿಲ್ಲದ ಕುರಿಯಂತಾಗುವುದಿಲ್ಲ.”

18 ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು. 19 ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ಅವನನ್ನು ನಿಲ್ಲಿಸು. ಅವರ ಎದುರಿನಲ್ಲಿಯೇ ಅವನಿಗೆ ಆದೇಶಗಳನ್ನು ಕೊಡು.

20 “ಇಸ್ರೇಲರ ಇಡೀ ಸಮುದಾಯವು ವಿಧೇಯರಾಗುವಂತೆ ನಿನ್ನ ಅಧಿಕಾರಗಳಲ್ಲಿ ಸ್ವಲ್ಪವನ್ನು ಅವನಿಗೆ ಕೊಡು. 21 ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.

22 ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು. 23 ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International