Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
ಅರಣ್ಯಕಾಂಡ 33-34

ಇಸ್ರೇಲರು ಈಜಿಪ್ಟಿನಿಂದ ಪ್ರಯಾಣ ಮಾಡಿದ ಸ್ಥಳಗಳ ಪಟ್ಟಿ

33 ಮೋಶೆ ಮತ್ತು ಆರೋನರ ನೇತೃತ್ವದಲ್ಲಿ ಈಜಿಪ್ಟ್ ದೇಶದಿಂದ ಹೊರಬಂದ ಇಸ್ರೇಲರ ಪ್ರಯಾಣಗಳ ವಿವರ: ಮೋಶೆ ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರು ಪ್ರಯಾಣಗಳಲ್ಲಿ ಇಳಿದುಕೊಂಡ ಸ್ಥಳಗಳ ಹೆಸರುಗಳನ್ನು ಬರೆದನು.

ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು. ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.

ಇಸ್ರೇಲರು ರಮ್ಸೇಸ್‌ನಿಂದ ಹೊರಟು ಸುಕ್ಕೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಸುಕ್ಕೋತಿನಿಂದ ಅವರು ಏತಾಮಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಜನರು ಅಲ್ಲಿ ಮರುಭೂಮಿಯ ಗಡಿಯಲ್ಲಿ ಪಾಳೆಯಮಾಡಿಕೊಂಡರು. ಅವರು ಏತಾಮನ್ನು ಬಿಟ್ಟು ಪೀಹಹೀರೋತಿಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು. ಇದು ಬಾಳ್ಚೆಫೋನಿನ ಹತ್ತಿರವಿತ್ತು. ಜನರು ಮಿಗ್ದೋಲಿನ ಬಳಿ ಪಾಳೆಯ ಮಾಡಿಕೊಂಡರು.

ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.

ಜನರು ಮಾರವನ್ನು ಬಿಟ್ಟು ಏಲೀಮಿಗೆ ಪ್ರಯಾಣ ಮಾಡಿ ಅಲ್ಲಿ ಇಳಿದುಕೊಂಡರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು.

10 ಜನರು ಏಲೀಮನ್ನು ಬಿಟ್ಟು ಕೆಂಪುಸಮುದ್ರದ ಹತ್ತಿರ ಪಾಳೆಯ ಮಾಡಿಕೊಂಡರು.

11 ಕೆಂಪುಸಮುದ್ರದಿಂದ ಹೊರಟು ಸೀನ್ ಅರಣ್ಯದಲ್ಲಿ ಪಾಳೆಯ ಮಾಡಿಕೊಂಡರು.

12 ಸೀನ್ ಅರಣ್ಯದಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.

13 ದೊಫ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.

14 ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯಲು ನೀರು ಇರಲಿಲ್ಲ.

15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.

16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.

17 ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.

18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.

19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.

20 ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.

21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.

22 ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.

23 ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.

24 ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.

25 ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.

26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.

27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.

28 ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.

29 ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.

30 ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.

31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.

32 ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದ್‌ನಲ್ಲಿ ಇಳಿದುಕೊಂಡರು.

33 ಹೋರ್ಹಗಿದ್ಗಾದ್‌ನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.

34 ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.

35 ಅಬ್ರೋನದಿಂದ ಹೊರಟು ಎಚ್ಯೋನ್‌ಗೆಬೆರಿನಲ್ಲಿ ಇಳಿದುಕೊಂಡರು.

36 ಎಚ್ಯೋನ್‌ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದು ಕಾದೇಶ್.

37 ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು. 38 ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು. 39 ಆರೋನನು “ಹೋರ್” ಬೆಟ್ಟದಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ಮೂರು ವರ್ಷ ವಯಸ್ಸಾಗಿತ್ತು.

40 ಇಸ್ರೇಲರು ಬರುತ್ತಾರೆಂಬ ಸುದ್ದಿಯನ್ನು ನೆಗೆವ್‌ನಲ್ಲಿ ವಾಸವಾಗಿದ್ದ ಅರಾದ್ ಪಟ್ಟಣದ ಅರಸನು ಕೇಳಿದನು. 41 ಇಸ್ರೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.

42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.

43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.

44 ಓಬೋತಿನಿಂದ ಹೊರಟು ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ಆಚೆ ಇರುವ ಇಯ್ಯಿಮಿನಲ್ಲಿ ಇಳಿದುಕೊಂಡರು.

45 ಇಯ್ಯಿಮಿನಿಂದ ಹೊರಟು ದೀಬೋನ್‌ಗಾದಿನಲ್ಲಿ ಇಳಿದುಕೊಂಡರು.

46 ದೀಬೋನ್‌ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.

47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೆಬೋವಿನ ಪೂರ್ವದಿಕ್ಕಿನಲ್ಲಿ ಇಳಿದುಕೊಂಡರು.

48 ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು. 49 ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.

50 ಆ ಸ್ಥಳದಲ್ಲಿದ್ದಾಗ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ: 51 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ನೀವು ಜೋರ್ಡನ್ ಹೊಳೆದಾಟಿ ಕಾನಾನ್ ದೇಶವನ್ನು ಸೇರಿದಾಗ 52 ಆ ದೇಶದ ನಿವಾಸಿಗಳನ್ನೆಲ್ಲ ಹೊರಡಿಸಿಬಿಟ್ಟು ಅವರ ಕೆತ್ತಿದ ಪ್ರತಿಮೆಗಳನ್ನು ಮತ್ತು ಲೋಹದ ವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು. 53 ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿದ್ದೇನೆ. ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು. 54 ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.

55 “ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು. 56 ಅದಲ್ಲದೆ, ನಾನು ಅವರಿಗೆ ಏನನ್ನು ಮಾಡಲು ಯೋಚಿಸಿದೆನೋ ಅದನ್ನು ನಿಮಗೆ ಮಾಡುವೆನು.”

ಕಾನಾನಿನ ಮೇರೆಗಳು

34 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು. ದಕ್ಷಿಣಭಾಗವು ಎದೋಮಿನ ಗಡಿಯಲ್ಲಿರುವ ಚಿನ್ ಮರುಭೂಮಿಯನ್ನು ಒಳಗೊಂಡಿದೆ. ಪೂರ್ವದ ಕಡೆಯಿರುವ ದಕ್ಷಿಣ ಗಡಿಯು ಉಪ್ಪುಸಮುದ್ರದ ದಕ್ಷಿಣಭಾಗದಿಂದ ಆರಂಭವಾಗುತ್ತದೆ. ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್‌ಗೆ ಹೋಗಿ ಅಚ್ಮೋನಿಗೆ ಮುಂದುವರಿಯುತ್ತದೆ. ಗಡಿಯು ಅಚ್ಮೋನಿನಿಂದ ಈಜಿಪ್ಟಿನ ನದಿಯ ಕಡೆಗೆ ತಿರುಗಿಕೊಂಡು ಸಮುದ್ರವನ್ನು ಸೇರುವುದು. ಪಶ್ಚಿಮದಿಕ್ಕಿನಲ್ಲಿ ಮೆಡಿಟೆರೇನಿಯನ್ ಸಮುದ್ರದ ತೀರ ನಿಮ್ಮ ದೇಶದ ಮೇರೆಯಾಗಿರುವುದು. ಉತ್ತರದಿಕ್ಕಿನ ಮೇರೆ ಮೆಡಿಟೆರೇನಿಯನ್ ಸಮುದ್ರದಿಂದ ಹಿಡಿದು ಲೆಬನೋನಿನಲ್ಲಿರುವ ಹೋರ್ ಬೆಟ್ಟದವರೆಗೂ ಇರುವುದು. ಹೋರ್ ಬೆಟ್ಟದಿಂದ ಅದು ಲೆಬೊಹಮಾತಿಗೆ ಹೋಗಿ ಅಲ್ಲಿಂದ ಚೆದಾದಿಗೆ ಹೋಗುವುದು. ಬಳಿಕ ಆ ಮೇರೆಯು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯುವುದು. ಹೀಗೆ ಅದು ನಿಮ್ಮ ಉತ್ತರ ಮೇರೆಯಾಗಿರುವುದು. 10 ನಿಮ್ಮ ಪೂರ್ವದಿಕ್ಕಿನಲ್ಲಿರುವ ಮೇರೆಯು ಹಚರೇನಾನಿನಿಂದ ಹೊರಟು ಶೆಫಾಮಿಗೆ ಹೋಗುವುದು. 11 ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು. 12 ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”

13 ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ. 14-15 ಬೇರೆ ಎರಡೂವರೆ ಕುಲಗಳವರು ಅಂದರೆ ರೂಬೇನ್ ಕುಲ ಮತ್ತು ಗಾದ್ ಕುಲ ಮತ್ತು ಮನಸ್ಸೆಯ ಅರ್ಧಕುಲವು ಜೆರಿಕೊ ಪಟ್ಟಣದ ಆಚೆಯಲ್ಲಿರುವ ಜೋರ್ಡನ್ ನದಿಯ ಪೂರ್ವಭಾಗದಲ್ಲಿ ಈಗಾಗಲೇ ಸ್ವಾಸ್ತ್ಯವನ್ನು ಹೊಂದಿ ತಮ್ಮ ಕುಟುಂಬಗಳ ಪ್ರಕಾರ ಹಂಚಿಕೊಂಡಿದ್ದಾರೆ.”

16 ಆಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ: 17 “ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ 18 ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ. 19 ಪ್ರತಿಯೊಂದು ಕುಲದಿಂದ ನೀವು ನೇಮಿಸಬೇಕಾದವರು ಇವರೇ:

ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್.

20 ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗನಾದ ಶೆಮೂವೇಲ್.

21 ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗನಾದ ಎಲೀದಾದ್.

22 ದಾನ್ ಕುಲದಿಂದ ಯೊಗ್ಲೀಯ ಮಗನಾದ ಬುಕ್ಕೀ ಕುಲಾಧಿಪತಿ.

23 ಯೋಸೇಫನ ಸಂತತಿಯವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗನಾದ ಹನ್ನೀಯೇಲ್ ಕುಲಾಧಿಪತಿ.

24 ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗನಾದ ಕೆಮೂವೇಲ್ ಕುಲಾಧಿಪತಿ.

25 ಜೆಬುಲೂನ್ ಕುಲದಿಂದ ಪರ್ನಾಕನ ಮಗನಾದ ಎಲೀಚಾಫಾನ್ ಕುಲಾಧಿಪತಿ.

26 ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗನಾದ ಪಲ್ಟೀಯೇಲ್ ಕುಲಾಧಿಪತಿ.

27 ಆಶೇರ್ ಕುಲದಿಂದ ಶೆಲೋಮಿಯ ಮಗನಾದ ಅಹೀಹೂದ್ ಕುಲಾಧಿಪತಿ.

28 ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗನಾದ ಪೆದಹೇಲ್ ಕುಲಾಧಿಪತಿ.”

29 ಕಾನಾನ್ ದೇಶದಲ್ಲಿ, ಇಸ್ರೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International