Print Page Options
Previous Prev Day Next DayNext

Beginning

Read the Bible from start to finish, from Genesis to Revelation.
Duration: 365 days
Kannada Holy Bible: Easy-to-Read Version (KERV)
Version
1 ಪೂರ್ವಕಾಲವೃತ್ತಾಂತ 7-8

ಇಸ್ಸಾಕಾರನ ಸಂತತಿಯವರು

ಇಸ್ಸಾಕಾರನಿಗೆ ನಾಲ್ಕು ಮಂದಿ ಗಂಡುಮಕ್ಕಳು: ತೋಲ, ಪೂವ, ಯಾಶೂಬ್ ಮತ್ತು ಶಿಮ್ರೋನ್.

ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.

ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು. ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.

ಸಂತಾನದ ಚರಿತ್ರೆಯ ಪ್ರಕಾರ ಇಸ್ಸಾಕಾರ್ ಕುಲದವರಲ್ಲಿದ್ದ ಯುದ್ಧವೀರರು ಎಂಭತ್ತೇಳು ಸಾವಿರ ಮಂದಿ.

ಬೆನ್ಯಾಮೀನನ ಸಂತತಿಯವರು

ಬೆನ್ಯಾಮೀನನಿಗೆ ಮೂರು ಮಂದಿ ಗಂಡುಮಕ್ಕಳು: ಬೆಳ, ಬೆಕೆರ್ ಮತ್ತು ಯೆದೀಯಯೇಲ್.

ಬೆಳನಿಗೆ ಐದು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ. ಇವರೆಲ್ಲಾ ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರಲ್ಲಿ ಸಿದ್ಧರಾಗಿದ್ದ ಯುದ್ಧವೀರರು ಇಪ್ಪತ್ತೆರಡು ಸಾವಿರದ ಮೂವತ್ನಾಲ್ಕು ಮಂದಿ.

ಬೆಕೆರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್. ಇವರೆಲ್ಲಾ ಬೆಕೆರನ ಮಕ್ಕಳು. ಅವರ ಕುಲಚರಿತ್ರೆಯಲ್ಲಿ ಅವರ ನಾಯಕರುಗಳು ಯಾರೆಂಬುದನ್ನು ಬರೆಯಲಾಗಿದೆ. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಇಪ್ಪತ್ತು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.

10 ಯೆದೀಯಯೇಲನ ಮಗನು ಬಿಲ್ಹಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ್. 11 ಯೆದೀಯಯೇಲನ ಎಲ್ಲಾ ಗಂಡುಮಕ್ಕಳು ತಮ್ಮ ಗೋತ್ರಗಳಿಗೆ ಪ್ರಧಾನರಾಗಿದ್ದರು. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಹದಿನೇಳು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.

12 ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಶೀಮನು ಅಹೇರನ ಮಗ.

ನಫ್ತಾಲಿಯ ಸಂತತಿಯವರು

13 ನಫ್ತಾಲಿಯ ಗಂಡುಮಕ್ಕಳು: ಯಹಚಿಯೇಲ್, ಗೂನೀ, ಯೇಚೆರ್ ಮತ್ತು ಶಲ್ಲೂಮ್. ಇವರೆಲ್ಲಾ ಬಿಲ್ಹಳ ಸಂತತಿಯವರು.

ಮನಸ್ಸೆ ಸಂತತಿಯವರು

14 ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ. 15 ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹೆಣ್ಣುಮಕ್ಕಳೇ ಹುಟ್ಟಿದವು. 16 ಮಾಕೀರನ ಹೆಂಡತಿಯಾದ ಮಾಕಳು ಒಂದು ಗಂಡುಮಗುವನ್ನು ಹೆತ್ತು ಅವನಿಗೆ ಪೆರೆಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಇವನ ಗಂಡುಮಕ್ಕಳು ಯಾರೆಂದರೆ: ಊಲಾಮ್ ಮತ್ತು ರೆಕೆಮ್.

17 ಊಲಾಮನ ಮಗನು ಬೆದಾನ್.

ಇವರೆಲ್ಲಾ ಗಿಲ್ಯಾದನ ಸಂತತಿಯವರು: ಗಿಲ್ಯಾದನು ಮಾಕೀರನ ಮಗ. ಮಾಕೀರನು ಮನಸ್ಸೆಯ ಮಗ. 18 ಮಾಕೀರನ ತಂಗಿ ಹಮ್ಮೋಲೆಕೆತಳಿಗೆ ಈಜ್ಡೋದ್, ಅಬೀಯೆಜೆರ್ ಮತ್ತು ಮಹ್ಲ ಎಂಬ ಗಂಡುಮಕ್ಕಳಿದ್ದರು.

19 ಶೆಮೀದನ ಮಕ್ಕಳು ಯಾರೆಂದರೆ: ಅಹ್ಯಾನ್, ಶೆಕೆಮ್, ಲಕ್ಹೀ ಮತ್ತು ಅನೀಯಾಮ್.

ಎಫ್ರಾಯೀಮನ ಸಂತತಿಯವರು

20 ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ. ಎಲ್ಲಾದನ ಮಗನು ತಹತ್. 21 ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು.

ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು. 22 ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು. 23 ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ “ಬೆರೀಯ” ಎಂದು ಹೆಸರಿಟ್ಟರು. 24 ಎಫ್ರಾಯೀಮನ ಮಗಳ ಹೆಸರು ಶೇರ. ಅವಳು ಕೆಳಗಿನ ಬೇತ್‌ಹೋರೋನ್ ಮತ್ತು ಮೇಲಿನ ಬೇತ್‌ಹೋರೋನ್ ಮತ್ತು ಕೆಳಗಿನ ಉಜ್ಜೇನ್‌ಶೇರ ಮತ್ತು ಮೇಲಿನ ಉಜ್ಜೇನ್‌ಶೇರ ಪಟ್ಟಣಗಳನ್ನು ಕಟ್ಟಿಸಿದಳು.

25 ರೆಫಹನು ಬೆರೀಯನ ಮಗನು. ರೆಫಹನ ಮಗನು ರೆಷೆಫ್. ರೆಷೆಫನ ಮಗನು ತೆಲಹ. ತೆಲಹನ ಮಗನು ತಹನ್. 26 ಲದ್ದಾನನು ತಹನನ ಮಗ. ಅಮ್ಮೀಹೂದನು ಲದ್ದಾನನ ಮಗ. ಎಲೀಷಾಮನು ಅಮ್ಮೀಹೂದನ ಮಗ. 27 ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ.

28 ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು; 29 ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.

ಆಶೇರನ ಸಂತತಿಯವರು

30 ಆಶೇರನ ಗಂಡುಮಕ್ಕಳು ಯಾರೆಂದರೆ: ಇಮ್ನ, ಇಷ್ವ, ಇಷ್ವೀ ಮತ್ತು ಬೆರೀಯ. ಅವರ ತಂಗಿ ಸೆರಹ.

31 ಬೆರೀಯನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್. ಮಲ್ಕೀಯೇಲನು ಬಿರ್ಜೈತನ ತಂದೆ.

32 ಹೆಬೆರನ ಗಂಡುಮಕ್ಕಳು ಯಾರೆಂದರೆ: ಯಫ್ಲೇಟ್, ಶೋಮೇರ್, ಹೋತಾಮ್ ಮತ್ತು ಅವರ ತಂಗಿ ಶೂವ.

33 ಯಫ್ಲೇಟನ ಗಂಡುಮಕ್ಕಳು ಯಾರೆಂದರೆ: ಪಾಸಾಕ್, ಬಿಮ್ಹಾಲ್ ಮತ್ತು ಅಶ್ವಾತ್.

34 ಶೆಮೆರನ ಗಂಡುಮಕ್ಕಳು ಯಾರೆಂದರೆ: ಅಹೀ, ರೊಹ್ಗ, ಹುಬ್ಬ ಮತ್ತು ಅರಾಮ್.

35 ಶೆಮೆರನ ತಮ್ಮನ ಹೆಸರು ಹೆಲೆಮ್. ಇವನ ಗಂಡುಮಕ್ಕಳು ಯಾರೆಂದರೆ: ಚೋಫಹ, ಇಮ್ನ, ಶೇಲೆಷ್ ಮತ್ತು ಆಮಾಲ್.

36 ಚೋಫಹನ ಗಂಡುಮಕ್ಕಳು ಯಾರೆಂದರೆ: ಸೂಹ, ಹರ್ನೆಫೆರ್, ಶೂಗಾಲ್, ಬೇರೀ, ಇಮ್ರ, 37 ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್ ಮತ್ತು ಬೇರ.

38 ಯೆತೆರನ ಗಂಡುಮಕ್ಕಳು ಯಾರೆಂದರೆ: ಯೆಫುನ್ನೆ, ಪಿಸ್ಪ ಮತ್ತು ಅರಾ.

39 ಉಲ್ಲನ ಗಂಡುಮಕ್ಕಳು ಯಾರೆಂದರೆ: ಆರಹ, ಹನ್ನೀಯೇಲ್ ಮತ್ತು ರಿಚ್ಯ.

40 ಇವರೆಲ್ಲರೂ ಆಶೇರನ ಸಂತತಿಯವರು. ಇವರೆಲ್ಲರೂ ಕುಲಪ್ರಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇಪ್ಪತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.

ಬೆನ್ಯಾಮೀನನ ಸಂತತಿಯವರು

ಬೆನ್ಯಾಮೀನನ ಮೊದಲನೆ ಮಗನು ಬೆಳ; ಎರಡನೆಯ ಮಗನು ಅಷ್ಬೇಲ್; ಮೂರನೆಯ ಮಗನು ಅಹ್ರಹ; ನಾಲ್ಕನೆಯ ಮಗನು ನೋಹ; ಮತ್ತು ಐದನೆಯ ಮಗನು ರಾಫ.

ಬೆಳನ ಮಕ್ಕಳು ಯಾರೆಂದರೆ: ಅದ್ದಾರ್, ಗೇರ, ಅಬೀಹೂದ್, 4-5 ಅಬೀಷೂವ, ನಾಮಾನ್, ಅಹೋಹ, ಗೇರ ಶೆಫೂಫಾನ್ ಮತ್ತು ಹೂರಾಮ್.

6-7 ಇವರು ಏಹೂದನ ಸಂತತಿಯವರು. ಇವರು ಗೆಬ ಗೋತ್ರಗಳ ನಾಯಕರುಗಳಾಗಿದ್ದರು. ಇವರನ್ನು ಇವರ ಮನೆಗಳಿಂದ ಬಲವಂತದಿಂದ ಹೊರಡಿಸಿ ಮಾನಹತಿಗೆ ಕಳುಹಿಸಲಾಯಿತು. ಏಹೂದನ ಸಂತತಿಯವರು ಯಾರೆಂದರೆ: ನಾಮಾನ್, ಅಹೀಯ ಮತ್ತು ಗೇರ. ಗೇರನು ಉಚ್ಚನ ಮತ್ತು ಅಹೀಹುದನ ತಂದೆ.

ಶಹರಯಿಮನು ಮೋವಾಬಿನಲ್ಲಿ ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ ಬೇರೊಬ್ಬ ಹೆಂಡತಿಯಿಂದ ಇತರ ಮಕ್ಕಳನ್ನು ಪಡೆದನು. 9-10 ಶಹರಯಿಮನಿಗೆ ಯೋವಾಬ್, ಚೆಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ವಿರ್ಮ ಎಂಬ ಗಂಡುಮಕ್ಕಳನ್ನು ತನ್ನ ಹೆಂಡತಿಯಾದ ಹೋದೆಷಳಿಂದ ಪಡೆದುಕೊಂಡನು. ಇವರೆಲ್ಲರೂ ತಮ್ಮ ಕುಲ ಪ್ರಧಾನರಾಗಿದ್ದರು. 11 ಶಹರಯಿಮ್ ಮತ್ತು ಹೂಷೀಮಳಿಗೆ ಅಬೀಟೂಬ್ ಮತ್ತು ಎಲ್ಛಾಲ ಎಂಬ ಇಬ್ಬರು ಮಕ್ಕಳಿದ್ದರು.

12-13 ಎಲ್ಪಾಲನ ಮಕ್ಕಳು ಯಾರೆಂದರೆ: ಏಬೆರ್, ಮಿಷ್ಬಾಮ್, ಶೆಮೆದ್, ಬೆರೀಯ ಮತ್ತು ಶಮ. ಶೆಮೆದನು ಓನೋ ಮತ್ತು ಲೋದ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಊರುಗಳನ್ನೂ ಕಟ್ಟಿಸಿದನು. ಅಯ್ಯಾಲೋನಿನಲ್ಲಿ ವಾಸಿಸುತ್ತಿದ್ದ ಕುಲದವರಿಗೆ ಬೆರೀಯ ಮತ್ತು ಶಮ ಕುಲ ಪ್ರಧಾನರಾಗಿದ್ದರು. ಇವರು ಗತ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಓಡಿಸಿದರು.

14 ಬೆರೀಯನ ಗಂಡುಮಕ್ಕಳು ಯಾರೆಂದರೆ: ಅಹ್ಯೋ, ಶಾಷಕ್, ಯೆರೇಮೋತ್, ಜೆಬದ್ಯ, 15 ಅರಾದ್, ಎದೆರ್, 16 ಮಿಕಾಯೇಲ್, ಇಷ್ಪ ಮತ್ತು ಯೋಹ. 17 ಎಲ್ಪಾಲನ ಗಂಡುಮಕ್ಕಳು ಯಾರೆಂದರೆ: ಜೆಬದ್ಯ, ಮೆಷುಲ್ಲಾಮ್, ಹಿಜ್ಕೀ, ಹೆಬೆರ್, 18 ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.

19 ಶಿಮ್ಮಿಯ ಗಂಡುಮಕ್ಕಳು ಯಾರೆಂದರೆ: ಯಾಕೀಮ್, ಜಿಕ್ರೀ, ಜಬ್ದೀ. 20 ಎಲೀಗೇನೈ, ಚಿಲ್ಲೆತೈ, ಎಲೀಯೇಲ್, 21 ಅದಾಯ, ಬೆರಾಯ ಮತ್ತು ಶಿಮ್ರಾತ್.

22 ಶಾಷಕನ ಮಕ್ಕಳು ಯಾರೆಂದರೆ: ಇಷ್ಪಾನ್, ಏಬೆರ್, ಎಲೀಯೇಲ್. 23 ಅಬ್ದೋನ್, ಜಿಕ್ರೀ, ಹಾನಾನ್, 24 ಹನನ್ಯ, ಏಲಾಮ್, ಅನೆತೋತೀಯ, 25 ಇಪ್ದೆಯಾಹ ಮತ್ತು ಪೆನೂವೇಲ್.

26 ಯೆರೋಹಾಮನ ಗಂಡುಮಕ್ಕಳು ಯಾರೆಂದರೆ: ಶಂಷೆರೈ, ಶೆಹರ್ಯ, ಅತಲ್ಯ, 27 ಯಾರೆಷ್ಯ, ಏಲೀಯ ಮತ್ತು ಜಿಕ್ರೀ.

28 ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.

29 ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ. 30 ಯೆಗೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ: ಚೂರ್, ಕೀಷ್, ಬಾಳ್, ನಾದಾಬ್, 31 ಗೇದೋರ್, ಅಹ್ಯೋ, ಜೆಕೆರ್ ಮತ್ತು ಮಿಕ್ಲೋತ್. 32 ಮಿಕ್ಲೋತನು ಶಿಮಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು.

33 ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳರ ತಂದೆ.

34 ಯೋನಾತಾನನ ಮಗ ಮೆರೀಬ್ಬಾಳ್. ಮೆರೀಬ್ಬಾಳನು ಮೀಕನ ತಂದೆ.

35 ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತರೇಯ ಮತ್ತು ಅಹಾಜ್.

36 ಅಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಅಲೆಮೆತನ, ಅಜ್ಮಾವೆತನ ಮತ್ತು ಜಿಮ್ರೀಯ ತಂದೆ. ಜಿಮ್ರೀಯು ಮೋಚನ ತಂದೆ. 37 ಮೋಚನು ಬಿನ್ನನ ತಂದೆ. ರಾಫನು ಬಿನ್ನನ ಮಗ. ಎಲ್ಲಾಸನು ರಾಫನ ಮಗ. ಆಚೇಲನು ಎಲ್ಲಾಸನ ಮಗ.

38 ಆಚೇಲನಿಗೆ ಆರು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್. ಇವರೆಲ್ಲರೂ ಆಚೇಲನ ಗಂಡುಮಕ್ಕಳು.

39 ಆಚೇಲನ ತಮ್ಮನಾದ ಏಷೆಕನ ಗಂಡುಮಕ್ಕಳು ಯಾರೆಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್. 40 ಊಲಾಮನ ಗಂಡುಮಕ್ಕಳೆಲ್ಲರೂ ರಣವೀರರು; ಬಿಲ್ಲುಬಾಣಗಳನ್ನು ಉಪಯೋಗಿಸುವುದರಲ್ಲಿ ನಿಪುಣರು. ಅವರಿಗೆ ಅನೇಕ ಗಂಡುಮಕ್ಕಳು ಮತ್ತು ಗಂಡುಮೊಮ್ಮಕ್ಕಳಿದ್ದರು. ಅವರಿಗೆ ಒಟ್ಟು ನೂರೈವತ್ತು ಮಂದಿ ಗಂಡುಮಕ್ಕಳು ಮತ್ತು ಗಂಡುಮೊಮ್ಮಕ್ಕಳು ಇದ್ದರು.

ಇವರೆಲ್ಲಾ ಬೆನ್ಯಾಮೀನನ ಸಂತತಿಯವರು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International