Daily Reading for Personal Growth, 40 Days with God
13 ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ. 14 ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ. 15 ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.
16 ನನ್ನ ಪ್ರಿಯ ಸಹೋದರ ಸಹೋದರಿಯರೇ, ಈ ವಿಷಯದಲ್ಲಿ ನೀವು ಮೋಸಹೋಗಬೇಡಿರಿ. 17 ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ. 18 ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.
Kannada Holy Bible: Easy-to-Read Version. All rights reserved. © 1997 Bible League International