Daily Reading for Personal Growth, 40 Days with God
17 ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ. 18 ನನ್ನ ಮಕ್ಕಳೇ, ನಮ್ಮ ಪ್ರೀತಿಯು ಕೇವಲ ಶಬ್ಧಗಳಲ್ಲಿ ಮತ್ತು ಮಾತಿನಲ್ಲಿ ಇರಬಾರದು. ನಮ್ಮ ಪ್ರೀತಿಯು ನಿಜವಾದ ಪ್ರೀತಿಯಾಗಿರಬೇಕು. ನಾವು ಮಾಡುವ ಕಾರ್ಯಗಳಲ್ಲಿಯೇ ನಮ್ಮ ಪ್ರೀತಿಯನ್ನು ತೋರ್ಪಡಿಸಬೇಕು.
19-20 ನಾವು ಸತ್ಯಮಾರ್ಗಕ್ಕೆ ಸೇರಿದವರೆಂಬುದನ್ನು ಈ ಮೂಲಕವಾಗಿಯೇ ತಿಳಿದುಕೊಳ್ಳುತ್ತೇವೆ. ನಮ್ಮ ಮನಸ್ಸಾಕ್ಷಿಯು ನಮ್ಮನ್ನು ತಪ್ಪಿತಸ್ಥರೆಂದು ಹೇಳಿದರೂ ನಾವು ದೇವರ ಎದುರಿನಲ್ಲಿ ಸಮಾಧಾನದಿಂದಿರಲು ಸಾಧ್ಯ. ಏಕೆಂದರೆ ನಮ್ಮ ಮನಸ್ಸಾಕ್ಷಿಗಿಂತ ದೇವರೇ ದೊಡ್ಡವನು. ಆತನಿಗೆ ಎಲ್ಲವೂ ತಿಳಿದಿದೆ.
21 ನನ್ನ ಪ್ರಿಯ ಸ್ನೇಹಿತರೇ, ನಾವು ತಪ್ಪು ಮಾಡುತ್ತಿಲ್ಲ ಎಂದು ನಮಗೆ ತಿಳಿದಿದ್ದರೆ, ನಾವು ದೇವರ ಬಳಿಗೆ ಧೈರ್ಯವಾಗಿ ಬರಲು ಸಾಧ್ಯ. 22 ಮತ್ತು ನಾವು ಕೇಳಿಕೊಳ್ಳುವವುಗಳನ್ನು ದೇವರು ನಮಗೆ ನೀಡುತ್ತಾನೆ. ನಾವು ಆತನಿಗೆ ವಿಧೇಯರಾಗಿರುವುದರಿಂದ ಮತ್ತು ಆತನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವುದರಿಂದ ಅವುಗಳನ್ನು ಆತನಿಂದ ಪಡೆದುಕೊಳ್ಳುತ್ತೇವೆ. 23 ದೇವರ ಆಜ್ಞೆ ಏನೆಂದರೆ ಆತನ ಮಗನಾದ ಯೇಸು ಕ್ರಿಸ್ತನಲ್ಲಿ ನಾವು ನಂಬಿಕೆಯಿಟ್ಟು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ. 24 ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.
Kannada Holy Bible: Easy-to-Read Version. All rights reserved. © 1997 Bible League International