Daily Reading for Personal Growth, 40 Days with God
10 “ಒಮ್ಮೆ ಒಬ್ಬ ಫರಿಸಾಯನು ಮತ್ತು ಒಬ್ಬ ಸುಂಕವಸೂಲಿಗಾರನು ಪ್ರಾರ್ಥಿಸಲು ದೇವಾಲಯಕ್ಕೆ ಹೋದರು. 11 ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. 12 ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.
13 “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು. 14 ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
Kannada Holy Bible: Easy-to-Read Version. All rights reserved. © 1997 Bible League International