Daily Reading for Personal Growth, 40 Days with God
2 ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ. 3 ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.
4 “ನಿಮ್ಮ ಸಭೆಗೆ ಸೇರಿದ ಸಾರ್ದಿಸಿನ ಕೆಲವರು ಇನ್ನೂ ಪರಿಶುದ್ಧರಾಗಿದ್ದಾರೆ. ಅವರು ತಮ್ಮ ಬಟ್ಟೆಗಳನ್ನು ಕೊಳಕು ಮಾಡಿಕೊಂಡಿಲ್ಲ. ಅವರು ನನ್ನೊಂದಿಗೆ ನಡೆಯುವರು. ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸುತ್ತಾರೆ. 5 ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.
Kannada Holy Bible: Easy-to-Read Version. All rights reserved. © 1997 Bible League International