Daily Reading for Personal Growth, 40 Days with God
42 ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು. 43 ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
44 ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು. 45 ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು. 46 ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ! 47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ:
‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು
ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’(A)”
48 ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.
49 ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು. 50 ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು. 51 ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ,[a] ಇಕೋನಿಯಾ ಪಟ್ಟಣಕ್ಕೆ ಹೋದರು. 52 ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.
Kannada Holy Bible: Easy-to-Read Version. All rights reserved. © 1997 Bible League International