Daily Reading for Personal Growth, 40 Days with God
ಕೋಪವನ್ನು ಕುರಿತು ಯೇಸುವಿನ ಉಪದೇಶ
21 “‘ಯಾರನ್ನೂ ಕೊಲೆಮಾಡಬಾರದು.(A) ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. 22 ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.
23 “ಆದ್ದರಿಂದ ನೀವು ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಮುಂದೆ ದೇವರಿಗೆ ಅರ್ಪಿಸುವಾಗ, ನಿಮ್ಮ ಸಹೋದರನಿಗೆ ನಿಮ್ಮ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿಮ್ಮ ನೆನಪಿಗೆ ಬಂದರೆ, 24 ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.
Kannada Holy Bible: Easy-to-Read Version. All rights reserved. © 1997 Bible League International