Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ರೋಮ್ನಗರದವರಿಗೆ 11:19-36

19 “ನಾವು ಆ ಮರದ ಕೊಂಬೆಗಳಿಗೆ ಸೇರಿಕೊಳ್ಳಬೇಕೆಂದು ಆ ಕೊಂಬೆಗಳು ಮುರಿಯಲ್ಪಟ್ಟವು” ಎಂದು ನೀವು ಹೇಳಬಹುದು. 20 ಅದು ಸತ್ಯ. ಆ ಕೊಂಬೆಗಳು ಮುರಿಯಲ್ಪಟ್ಟವು. ಅದಕ್ಕೆ ಅಪನಂಬಿಕೆಯೇ ಕಾರಣ. ನೀವು ಆ ಮರದ ಒಂದು ಭಾಗವಾದದ್ದು ನಿಮ್ಮ ನಂಬಿಕೆಯಿಂದಲೇ. ಆದ್ದರಿಂದ ಗರ್ವಪಡಬೇಡ, ಭಯದಿಂದಿರು. 21 ದೇವರು ಸಹಜವಾದ ಕೊಂಬೆಗಳನ್ನೇ ಉಳಿಸಿಲ್ಲದಿರುವುದರಿಂದ ನೀವು ನಂಬದಿದ್ದರೆ ಆತನು ನಿನ್ನನ್ನು ಉಳಿಸುವುದಿಲ್ಲ.

22 ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು. 23 ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ. 24 ಕಾಡುಕೊಂಬೆಯೊಂದು ಒಳ್ಳೆಯ ಮರದ ಕೊಂಬೆಯಾಗುವುದು ಸಹಜವಾದದ್ದಲ್ಲ. ಆದರೆ ಯೆಹೂದ್ಯರಲ್ಲದ ನೀವು ಕಾಡು ಆಲಿವ್ ಮರದಿಂದ ಕತ್ತರಿಸಲ್ಪಟ್ಟ ಕೊಂಬೆಯಾಗಿದ್ದು ಒಳ್ಳೆಯ ಆಲಿವ್ ಮರಕ್ಕೆ ಕಸಿಕಟ್ಟಲ್ಪಟ್ಟಿದ್ದೀರಿ. ಯೆಹೂದ್ಯರಾದರೋ ಒಳ್ಳೆಯ ಆಲಿವ್ ಮರದಲ್ಲಿ ಬೆಳೆದ ರೆಂಬೆಗಳು. ಆದ್ದರಿಂದ ಅವರು ತಮ್ಮ ಸ್ವಂತ ಮರಕ್ಕೆ ಮತ್ತೆ ಸೇರಿಸಲ್ಪಡಲು ಖಂಡಿತವಾಗಿಯೂ ಸಾಧ್ಯ.

25 ಸಹೋದರ ಸಹೋದರಿಯರೇ, ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳದಂತೆ ಇದುವರೆಗೆ ರಹಸ್ಯವಾಗಿದ್ದ ಸತ್ಯವನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ: ಇಸ್ರೇಲಿನ ಜನರಲ್ಲಿ ಒಂದು ಪಾಲು ಮಂದಿ ಮೊಂಡರಾದರು. ಆದರೆ ಯೆಹೂದ್ಯರಲ್ಲದ ಜನರೆಲ್ಲರೂ ದೇವರ ಬಳಿಗೆ ಬಂದಾಗ ಅವರ ಮೊಂಡತನವು ಇಲ್ಲವಾಗುವುದು. 26 ಹೀಗೆ ಎಲ್ಲಾ ಇಸ್ರೇಲರು ರಕ್ಷಣೆ ಹೊಂದುವರು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:

“ಸಿಯೋನಿನಿಂದ ರಕ್ಷಕನು ಬರುವನು:
    ಆತನು ಯಾಕೋಬನ ಕುಟುಂಬದಿಂದ ಎಲ್ಲಾ ದುಷ್ಟತನವನ್ನು ನಿವಾರಣೆ ಮಾಡುವನು.
27 ನಾನು ಆ ಜನರ ಪಾಪಗಳನ್ನು ಪರಿಹರಿಸುವಾಗ
    ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.”(A)

28 ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ. 29 ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ. 30 ಒಂದು ಕಾಲದಲ್ಲಿ ನೀವು ಆತನಿಗೆ ವಿಧೇಯರಾಗಿರಲಿಲ್ಲ. ಈಗಲಾದರೋ ನೀವು ಕರುಣೆಯನ್ನು ಹೊಂದಿಕೊಂಡಿರಿ. ಏಕೆಂದರೆ ಅವರು (ಯೆಹೂದ್ಯರು) ಆತನಿಗೆ ಅವಿಧೇಯರಾದರು. 31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು. 32 ಎಲ್ಲರೂ ದೇವರಿಗೆ ಅವಿಧೇಯರಾದರು. ದೇವರು ಎಲ್ಲರಿಗೂ ಕರುಣೆಯನ್ನು ತೋರಬೇಕೆಂದು ಎಲ್ಲರನ್ನೂ ಒಟ್ಟಾಗಿ ಅವಿಧೇಯತ್ವದಿಂದ ಬಂಧಿಸಿದ್ದಾನೆ.

ದೇವರಿಗೆ ಸ್ತೋತ್ರವಾಗಲಿ

33 ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು. 34 ಪವಿತ್ರ ಗ್ರಂಥ ಹೇಳುವಂತೆ:

“ಪ್ರಭುವಿನ ಮನಸ್ಸನ್ನು ಯಾರು ಬಲ್ಲರು?
    ದೇವರಿಗೆ ಸಲಹೆಯನ್ನು ಯಾರು ಕೊಡಬಲ್ಲರು?”(B)

35 “ಮೊದಲು ದೇವರಿಗೆ ಕೊಟ್ಟು ಪ್ರತಿಫಲ ಪಡೆದವರ್ಯಾರು?
    ದೇವರು ಯಾರಿಗೂ ಸಾಲಗಾರನಾಗಿಲ್ಲ.”(C)

36 ಹೌದು, ದೇವರು ಸಮಸ್ತವನ್ನು ಸೃಷ್ಟಿಸಿದನು. ಸಮಸ್ತವು ದೇವರ ಮೂಲಕವಾಗಿಯೂ ದೇವರಿಗಾಗಿಯೂ ಮುಂದುವರಿಯುತ್ತಿದೆ. ದೇವರಿಗೆ ಸದಾಕಾಲವೂ ಸ್ತೋತ್ರ! ಆಮೆನ್.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International