Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
1 ಕೊರಿಂಥದವರಿಗೆ 10:19-33

19 ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ. 20 ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ. 21 ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ. 22 ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!

ನಿಮ್ಮ ಸ್ವತಂತ್ರ ದೇವರ ಮಹಿಮೆಗೋಸ್ಕರ

23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ. 24 ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು.

25 ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ. 26 ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”(A)

27 ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ. 28 ಆದರೆ ಒಬ್ಬನು ನಿಮಗೆ, “ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು. 29 ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು. 30 ನಾನು ದೇವರಿಗೆ ಕೃತಜ್ಞತೆ ಸಲ್ಲಿಸಿ ಊಟಮಾಡಿದ ಪದಾರ್ಥದಿಂದಾಗಿ ಖಂಡನೆಗೆ ಗುರಿಯಾಗಲು ನನಗೆ ಇಷ್ಟವಿಲ್ಲ.

31 ಆದ್ದರಿಂದ ನೀವು ತಿಂದರೂ ಕುಡಿದರೂ ಏನೇ ಮಾಡಿದರೂ ದೇವರ ಮಹಿಮೆಗಾಗಿ ಅದನ್ನು ಮಾಡಿರಿ. 32 ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ. 33 ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International