Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಮಾರ್ಕ 13:21-37

21 “ಆ ಸಮಯದಲ್ಲಿ, ಯಾರಾದರೂ ನಿಮಗೆ ‘ಕ್ರಿಸ್ತನು ಅಲ್ಲಿದ್ದಾನೆ, ನೋಡು’ ಎನ್ನಬಹುದು. ಅಥವಾ ಇನ್ನೊಬ್ಬನು, ‘ಆತನು ಇಲ್ಲಿದ್ದಾನೆ’ ಎನ್ನಬಹುದು. ಆದರೆ ಅವರನ್ನು ನಂಬಬೇಡಿ. 22 ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ. 23 ಆದ್ದರಿಂದ ಎಚ್ಚರಿಕೆಯಿಂದಿರಿ, ಇದು ನಡೆಯುವ ಮುಂಚೆ ಇದೆಲ್ಲದರ ಬಗ್ಗೆ ನಿಮ್ಮನ್ನು ಎಚ್ಚರಿಸಿದ್ದೇನೆ.

24 “ಈ ಸಂಕಟವು ತೀರಿದ ಮೇಲೆ,

‘ಸೂರ್ಯನು ಕತ್ತಲಾಗುತ್ತಾನೆ.
    ಚಂದ್ರನು ಬೆಳಕನ್ನು ಕೊಡುವುದಿಲ್ಲ.
25 ನಕ್ಷತ್ರಗಳು ಆಕಾಶದಿಂದ ಬೀಳುವವು
    ಮತ್ತು ಆಕಾಶದಲ್ಲಿರುವ ಶಕ್ತಿಗಳು ನಡುಗುವವು.’[a]

26 “ಆಗ ಮನುಷ್ಯಕುಮಾರನು ಅಧಿಕಾರದಿಂದಲೂ ಮಹಾಮಹಿಮೆಯೊಡನೆಯೂ ಮೇಘಗಳಲ್ಲಿ ಬರುವುದನ್ನು ಜನರು ನೋಡುತ್ತಾರೆ. 27 ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸಿ ತಾನು ಆರಿಸಿಕೊಂಡ ಜನರನ್ನು ಭೂಮಿಯ ಕಟ್ಟಕಡೆಗಳಿಂದ ಒಟ್ಟುಗೂಡಿಸುವರು.

28 “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸಿರಾಗಿ ಮೃದುವಾದಾಗ ಮತ್ತು ಹೊಸ ಎಲೆಗಳು ಬೆಳೆಯಲು ಪ್ರಾರಂಭಿಸಿದಾಗ, ಬೇಸಿಗೆಕಾಲ ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ. 29 ಅಂತೆಯೇ ನಾನು ನಿಮಗೆ ಹೇಳಿದ ಈ ಸಂಗತಿಗಳು ನೆರವೇರುವುದನ್ನು ನೀವು ನೋಡುವಾಗ, ಸಮಯವು ಹತ್ತಿರವಾಗಿದೆಯೆಂದೂ ಬರಲು ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳಿರಿ. 30 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಬದುಕಿರುವಾಗಲೇ ಈ ಎಲ್ಲಾ ಸಂಗತಿಗಳು ನಡೆಯುತ್ತವೆ. 31 ಭೂಮ್ಯಾಕಾಶಗಳು ನಾಶವಾಗುತ್ತವೆ. ಆದರೆ ನಾನು ಹೇಳಿದ ಮಾತುಗಳು ಎಂದೆಂದಿಗೂ ನಾಶವಾಗುವುದಿಲ್ಲ.

32 “ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ. 33 ಎಚ್ಚರಿಕೆಯಿಂದಿರಿ! ಯಾವಾಗಲೂ ಸಿದ್ಧರಾಗಿರಿ! ಆ ಸಮಯ ಯಾವಾಗ ಬರುತ್ತದೆಂದು ನಿಮಗೆ ತಿಳಿದಿಲ್ಲ.

34 “ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ, 35 ಯಾವಾಗಲೂ ಸಿದ್ಧವಾಗಿರಿ. ಮನೆಯ ಯಜಮಾನನು ಯಾವಾಗ ಹಿಂತಿರುಗಿ ಬರುವನೋ ನಿಮಗೆ ತಿಳಿದಿಲ್ಲ. ಅವನು ಮಧ್ಯಾಹ್ನದಲ್ಲಾಗಲಿ ಮಧ್ಯರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಸೂರ್ಯೋದಯದಲ್ಲಾಗಲಿ ಬರಬಹುದು. 36 ಯಜಮಾನನು ಬೇಗನೆ ಹಿಂತಿರುಗಿ ಬರಬಹುದು. ನೀವು ಯಾವಾಗಲೂ ಸಿದ್ಧವಾಗಿದ್ದರೆ, ಅವನು ಬಂದಾಗ ನೀವು ನಿದ್ರಿಸುತ್ತಿರುವುದಿಲ್ಲ. 37 ನಾನು ನಿಮಗೂ ಪ್ರತಿಯೊಬ್ಬರಿಗೂ ಹೇಳುವುದೇನೆಂದರೆ, ‘ಸಿದ್ಧರಾಗಿರಿ!’”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International