Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಲೂಕ 1:39-56

ಮರಿಯಳು ನೀಡಿದ ಸಂದರ್ಶನ

39 ಆಗ ಮರಿಯಳು ಎದ್ದು ಜುದೇಯದ ಗುಡ್ಡಪ್ರದೇಶದಲ್ಲಿರುವ ಒಂದು ಊರಿಗೆ ಬೇಗಬೇಗನೆ ಹೋದಳು. 40 ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು. 41 ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ

42 ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ. 43 ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ! 44 ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು. 45 ಪ್ರಭುವು ನಿನಗೆ ಹೇಳಿದ್ದು ಸಂಭವಿಸೇ ತೀರುವುದೆಂದು ನೀನು ನಂಬಿ ಧನ್ಯಳಾದೆ” ಎಂದಳು.

ಮರಿಯಳು ದೇವರನ್ನು ಸ್ತುತಿಸಿದಳು

46 ಆಗ ಮರಿಯಳು,

47 “ನನ್ನ ಪ್ರಾಣವು ಪ್ರಭುವನ್ನು ಸ್ತುತಿಸುತ್ತದೆ.
    ದೇವರೇ ನನ್ನ ರಕ್ಷಕನಾಗಿರುವುದರಿಂದ ನನ್ನ ಹೃದಯವು ಸಂತೋಷಗೊಂಡಿದೆ.
48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
    ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.
49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ.
    ಆತನ ಹೆಸರು ಅತಿ ಪರಿಶುದ್ಧವಾದದ್ದು.
50 ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.
51 ಆತನು ತನ್ನ ಭುಜಬಲವನ್ನು ತೋರಿ
    ಗರ್ವಿಷ್ಠರನ್ನು ಚದರಿಸುತ್ತಾನೆ.
52 ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ
    ದೀನರನ್ನು ಉನ್ನತಿಗೇರಿಸುತ್ತಾನೆ.
53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ
    ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.
54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ
    ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ
55 ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.

56 ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International