Print Page Options
Previous Prev Day Next DayNext

New Testament in a Year

Read the New Testament from start to finish, from Matthew to Revelation.
Duration: 365 days
Kannada Holy Bible: Easy-to-Read Version (KERV)
Version
ಲೂಕ 2:25-52

ಸಿಮೆಯೋನನು ಯೇಸುವನ್ನು ನೋಡಿದನು

25 ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು. 26 ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು. 27 ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು. 28 ಸಿಮೆಯೋನನು ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರಿಗೆ ಹೀಗೆಂದು ಸ್ತೋತ್ರ ಸಲ್ಲಿಸಿದನು:

29 “ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.
30 ನೀನು ದಯಪಾಲಿಸಿದ ರಕ್ಷಕನನ್ನು[a] ಕಣ್ಣಾರೆಕಂಡೆನು.
31 ನೀನು ಆತನನ್ನು ಜನರೆಲ್ಲರಿಗೆ ಪ್ರತ್ಯಕ್ಷ ಮಾಡಿರುವೆ.
32 ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ.
    ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”

33 ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು. 34 ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು. 35 ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.

ಅನ್ನಳು ಯೇಸುವನ್ನು ನೋಡಿದಳು

36 ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ[b] ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು. 37 ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.

38 ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.

ಯೋಸೇಫನು ಮತ್ತು ಮರಿಯಳು ಮನೆಗೆ ಮರಳಿದರು

39 ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು. 40 ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.

ಬಾಲಕ ಯೇಸು

41 ಪ್ರತಿವರ್ಷ ಯೇಸುವಿನ ತಂದೆತಾಯಿಗಳು ಪಸ್ಕಹಬ್ಬಕ್ಕಾಗಿ[c] ಜೆರುಸಲೇಮಿಗೆ ಹೋಗುತ್ತಿದ್ದರು. 42 ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು. 43 ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ 44 ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು. 45 ಆದರೆ ಅಲ್ಲೆಲ್ಲೂ ಕಾಣದೆ ಯೇಸುವನ್ನು ಹುಡುಕಲು ಜೆರುಸಲೇಮಿಗೆ ಮರಳಿಹೋದರು.

46 ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು. 47 ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು. 48 ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.

49 ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು. 50 ಆದರೆ ಆತನ ಮಾತು ಅವರಿಗೆ ಅರ್ಥವಾಗಲಿಲ್ಲ.

51 ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು. 52 ಯೇಸುವು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು. ದೇವರಿಗೂ ಜನರಿಗೂ ಅಚ್ಚುಮೆಚ್ಚಾದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International