Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 34:1-8

ದಾವೀದನು ಹುಚ್ಚನಂತೆ ವರ್ತಿಸಿ, ಅಬೀಮೆಲೆಕನಿಂದ ಹೊರಡಿಸಲ್ಪಟ್ಟಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ.

[a]34 ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು.
    ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.
ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು
    ಕೇಳಿ ಸಂತೋಷಪಡಿರಿ.
ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ.
    ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.
ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು.
    ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.
ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು.[b]
    ಅವರಿಗೆ ಆಶಾಭಂಗವಾಗದು.
ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು
    ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.
ಯೆಹೋವನ ಭಕ್ತರ ಸುತ್ತಲೂ ಆತನ ದೂತನು
    ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.
ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ.
    ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.

1 ಸಮುವೇಲನು 28:20-25

20 ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು.

21 ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ. 22 ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.

23 ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು.

ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು. 24 ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು. 25 ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು.

ರೋಮ್ನಗರದವರಿಗೆ 15:1-6

15 ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು. ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಹಿತವನ್ನು ನೋಡಿಕೊಳ್ಳಬೇಕು. ನಂಬಿಕೆಯಲ್ಲಿ ಬಲಹೀನರಾಗಿರುವವರನ್ನು ಬಲಗೊಳಿಸಲು ನೆರವಾಗಿರಬೇಕು. ಕ್ರಿಸ್ತನು ಸಹ ತನ್ನ ಜೀವಮಾನದಲ್ಲಿ ತನ್ನ ಹಿತಕ್ಕಾಗಿ ಪ್ರಯತ್ನಿಸಲಿಲ್ಲ. “ನಿನಗೆ ಅವಮಾನ ಮಾಡಿದ ಜನರು ನನಗೂ ಅವಮಾನ ಮಾಡಿದರು”(A) ಎಂಬುದಾಗಿ ಆತನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ. ತಾಳ್ಮೆ ಮತ್ತು ಶಕ್ತಿ ದೇವರಿಂದ ಬರುತ್ತವೆ. ಕ್ರಿಸ್ತ ಯೇಸು ಬಯಸುವ ಮಾರ್ಗವನ್ನು ನೀವೆಲ್ಲರೂ ಒಟ್ಟಾಗಿ ಒಪ್ಪಿಕೊಳ್ಳಲು ದೇವರು ನಿಮಗೆ ಸಹಾಯ ಮಾಡಲೆಂದು ನಾನು ಪ್ರಾರ್ಥಿಸುತ್ತೇನೆ. ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International