Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
Error: 'ಸೊಲೊಮೋನನ ಜ್ಞಾನಗ್ರಂಥ 1:16-2:1' not found for the version: Kannada Holy Bible: Easy-to-Read Version
Error: 'ಸೊಲೊಮೋನನ ಜ್ಞಾನಗ್ರಂಥ 2:12-22' not found for the version: Kannada Holy Bible: Easy-to-Read Version
ಯೆರೆಮೀಯ 11:18-20

ಯೆರೆಮೀಯನ ವಿರುದ್ಧ ಒಳಸಂಚು

18 ಅನಾತೋತಿನ[a] ಜನರು ನನ್ನ ವಿರುದ್ಧ ಮಾಡುತ್ತಿರುವ ಕುತಂತ್ರವನ್ನೂ ಮಾಡುವ ಕೃತ್ಯಗಳನ್ನೂ ಯೆಹೋವನು ನನಗೆ ತೋರಿಸಿದನು. ಆದ್ದರಿಂದ ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡೆನು. 19 ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.” 20 ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.

ಕೀರ್ತನೆಗಳು 54

ಜಿಫೆಂಬ ಸ್ಥಳದವರು ಸೌಲನ ಬಳಿಗೆ ಹೋಗಿ, “ದಾವೀದನು ನಮ್ಮಲ್ಲಿ ಅಡಗಿಕೊಂಡಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ.

54 ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು!
    ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.
ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು.
    ನನ್ನ ಮಾತುಗಳನ್ನು ಕೇಳು.
ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ.
    ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.

ಇಗೋ, ನನ್ನ ದೇವರೇ ನನಗೆ ಸಹಾಯಮಾಡುವನು.
    ನನ್ನ ಒಡಯನೇ ನನಗೆ ಆಧಾರ ನೀಡುವನು.
ನನಗೆ ವಿರೋಧವಾಗಿ ತಿರುಗಿರುವ ಜನರನ್ನು ನನ್ನ ದೇವರು ದಂಡಿಸುವನು.
    ದೇವರು ನನಗೆ ನಂಬಿಗಸ್ತನಾಗಿದ್ದಾನೆ. ಆತನು ಅವರನ್ನು ನಾಶಮಾಡುವನು.

ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು.
    ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.
ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ.
    ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.

ಯಾಕೋಬನು 3:13-4:3

ನಿಜವಾದ ಜ್ಞಾನ

13 ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ. 14 ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ. 15 ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು. 16 ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ. 17 ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು. 18 ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.

ದೇವರಿಗೆ ನಿಮ್ಮನ್ನು ಒಪ್ಪಿಸಿಕೊಳ್ಳಿ

ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ. ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ. ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.

ಯಾಕೋಬನು 4:7-8

ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ. ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.

ಮಾರ್ಕ 9:30-37

ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ

(ಮತ್ತಾಯ 17:22-23; ಲೂಕ 9:43-45)

30 ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು. 31 ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು. 32 ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.

ಯಾರು ಅತ್ಯಂತ ದೊಡ್ಡವರು?

(ಮತ್ತಾಯ 18:1-5; ಲೂಕ 9:46-48)

33 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು. 34 ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು.

35 ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು.

36 ನಂತರ ಯೇಸು ಒಂದು ಚಿಕ್ಕ ಮಗುವನ್ನು ಕರೆದು, ಆ ಮಗುವನ್ನು ಶಿಷ್ಯರ ಮುಂದೆ ನಿಲ್ಲಿಸಿ, ಅದನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ಅವರಿಗೆ, 37 “ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International