Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 90:12-17

12 ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು.
    ಆಗ ನಾವು ವಿವೇಕಿಗಳಾಗುವೆವು.
13 ಯೆಹೋವನೇ, ನಮ್ಮ ಬಳಿಗೆ ಹಿಂತಿರುಗಿ ಬಾ.
    ನಿನ್ನ ಸೇವಕರ ಮೇಲೆ ಅಂತಃಕರಣವಿರಲಿ.
14 ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು.
    ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
15 ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ.
    ಈಗ ನಮ್ಮನ್ನು ಸಂತೋಷಗೊಳಿಸು.
16 ನೀನು ನಿನ್ನ ಸೇವಕರುಗಳಿಗಾಗಿ ಮಾಡಬಲ್ಲ ಅದ್ಭುತಕಾರ್ಯಗಳನ್ನು ನಾವು ನೋಡುವಂತಾಗಲಿ.
17 ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು.
    ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ;
    ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.

ಆಮೋಸ 3:13-4:5

13 ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು. 14 ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನು ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು. 15 ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.

ಸುಖವನ್ನು ಆಶಿಸುವ ಹೆಂಗಸರು

ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.

ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನೆಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು. ನಿಮ್ಮ ಪಟ್ಟಣಗಳು ನಾಶವಾಗುವವು. ಗೋಡೆಯಲ್ಲಿರುವ ಬಿರುಕುಗಳ ಮೂಲಕ ಹೆಂಗಸರು ತಪ್ಪಿಸಿಕೊಂಡು ಹೋಗಿ ಹೆಣಗಳ ರಾಶಿಯ[a] ಮೇಲೆ ಬೀಳುವರು.

ಯೆಹೋವನು ಹೀಗೆ ಹೇಳುತ್ತಾನೆ, “ಬೇತೇಲಿನಲ್ಲಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಇನ್ನೂ ಹೆಚ್ಚಾಗಿ ಪಾಪ ಮಾಡಿರಿ. ನಿಮ್ಮ ಯಜ್ಞವನ್ನು ಮುಂಜಾನೆ ಸಮರ್ಪಿಸಿರಿ. ಮೂರು ದಿವಸಗಳ ಹಬ್ಬಕ್ಕೆ ನಿಮ್ಮ ಬೆಳೆಯ ಹತ್ತನೆಯ ಒಂದು ಭಾಗವನ್ನು ತೆಗೆದುಕೊಂಡು ಬನ್ನಿ. ಹುಳಿಹಾಕಿದ ರೊಟ್ಟಿಗಳನ್ನು ಕೃತಜ್ಞತಾ ಹೋಮಮಾಡಿರಿ. ಸ್ವೇಚ್ಚೆಯಿಂದ ಕೊಡುವ ಕಾಣಿಕೆ ಬಗ್ಗೆ ಎಲ್ಲರಿಗೂ ತಿಳಿಸಿರಿ. ಇಸ್ರೇಲರೇ ಅಂಥಾ ಕಾರ್ಯಗಳನ್ನು ಮಾಡಲು ನಿಮಗೆ ಇಷ್ಟ. ಆದ್ದರಿಂದ ಹೋಗಿ ಅದನ್ನು ಮಾಡಿರಿ.” ಇದು ಯೆಹೋವನ ನುಡಿ.

ಮತ್ತಾಯ 15:1-9

ದೇವರ ಆಜ್ಞೆ ಮತ್ತು ಮನುಷ್ಯರ ನಿಯಮ

(ಮಾರ್ಕ 7:1-23)

15 ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು, “ನಮ್ಮ ಪೂರ್ವಿಕರಿಂದ ಬಂದ ಸಂಪ್ರದಾಯಗಳಿಗೆ ನಿನ್ನ ಶಿಷ್ಯರು ಏಕೆ ವಿಧೇಯರಾಗಿರುವುದಿಲ್ಲ? ನಿನ್ನ ಶಿಷ್ಯರು ಊಟ ಮಾಡುವುದಕ್ಕೆ ಮುಂಚೆ ಕೈ ತೊಳೆಯುವುದಿಲ್ಲವೇಕೆ?” ಎಂದು ಕೇಳಿದರು.

ಯೇಸು, “ನಿಮ್ಮ ಸಂಪ್ರದಾಯಗಳನ್ನು ಅನುಸರಿಸಲು ದೇವರ ಆಜ್ಞೆಗೆ ಅವಿಧೇಯರಾಗುವುದೇಕೆ? ‘ನಿಮ್ಮ ತಂದೆತಾಯಿಗಳಿಗೆ ಗೌರವ ನೀಡಿ’(A) ಎಂಬುದು ದೇವರ ಆಜ್ಞೆ. ‘ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೀನೈಸಿದರೆ ಅವನನ್ನು ಕೊಲ್ಲಬೇಕು’(B) ಎಂಬುದೂ ದೇವರ ಆಜ್ಞೆ. ಆದರೆ ಒಬ್ಬ ವ್ಯಕ್ತಿಯು ತನ್ನ ತಂದೆಗಾಗಲಿ ತಾಯಿಗಾಗಲಿ ‘ನಿಮಗೆ ಸಹಾಯ ಮಾಡಲು ನನಗೆ ಸಾಧ್ಯವಿಲ್ಲ, ಏಕೆಂದರೆ ನನ್ನಲ್ಲಿರುವ ಪ್ರತಿಯೊಂದು ದೇವರಿಗೆ ಪ್ರತಿಷ್ಠಿತವಾಗಿದೆ’ ಎಂದು ಹೇಳಿದರೆ, ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ. ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:

‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ.
    ಇವರ ಮನಸ್ಸಾದರೋ ನನಗೆ ದೂರವಾಗಿದೆ.
ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ.
    ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’(C)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International