Revised Common Lectionary (Complementary)
ರಚನೆಗಾರ: ದಾವೀದ.
145 ನನ್ನ ದೇವರೇ, ನನ್ನ ರಾಜನೇ, ನಿನ್ನನ್ನು ಸ್ತುತಿಸುವೆನು;
ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
2 ನಿನ್ನನ್ನು ಪ್ರತಿದಿನವೂ ಸ್ತುತಿಸುವೆನು.
ನಿನ್ನ ಹೆಸರನ್ನು ಎಂದೆಂದಿಗೂ ಕೊಂಡಾಡುವೆನು.
3 ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ.
ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.
4 ಯೆಹೋವನೇ, ನಿನ್ನ ಕಾರ್ಯಗಳನ್ನು ಜನರು ಎಂದೆಂದಿಗೂ ಸ್ತುತಿಸುವರು;
ನಿನ್ನ ಮಹತ್ಕಾರ್ಯಗಳ ವಿಷಯವಾಗಿ ಜನರು ಬೇರೆಯವರಿಗೆ ಹೇಳುವರು.
5 ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು.
ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು.
6 ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು.
ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.
7 ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು.
ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.
8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ
ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.
13 ದೇವರು ಆಮೇಲೆ ಉತ್ತರಕ್ಕೆ ಮುಖಮಾಡಿ ಅಶ್ಶೂರವನ್ನು ಶಿಕ್ಷಿಸುವನು. ಆತನು ನಿನೆವೆ ಪಟ್ಟಣವನ್ನು ಶಿಕ್ಷಿಸಿದಾಗ ಅದು ನಿರ್ಜನವಾದ ಮರುಭೂಮಿಯಾಗುವದು. 14 ಆಮೇಲೆ ಆ ಹಾಳುಬಿದ್ದ ನಗರದಲ್ಲಿ ಕಾಡುಪ್ರಾಣಿಗಳೂ ಕುರಿಗಳೂ ವಾಸಮಾಡುವವು. ಕಾಗೆಗಳೂ ಗೂಬೆಗಳೂ ಪಟ್ಟಣದ ಸ್ತಂಭಗಳ ಮೇಲೆ ಕುಳಿತುಕೊಂಡು ಒಂದನ್ನೊಂದು ಕರೆಯುವವು. ಬಾಗಿಲ ಹೊಸ್ತಿಲಲ್ಲಿ ಕಾಗೆಗಳು ಕುಳಿತುಕೊಳ್ಳುವವು. ಕಪ್ಪುಪಕ್ಷಿಗಳು ನಿರ್ಜನವಾದ ಮನೆಗಳ ಮೇಲೆ ಕುಳಿತುಕೊಳ್ಳುವವು. 15 ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
23 ಆಗ ಯೇಸು ತನ್ನ ಶಿಷ್ಯರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಐಶ್ವರ್ಯವಂತನು ಪರಲೋಕರಾಜ್ಯಕ್ಕೆ ಪ್ರವೇಶಿಸುವುದು ಬಹಳ ಕಷ್ಟಕರ. 24 ಹೌದು, ಐಶ್ವರ್ಯವಂತನು ದೇವರ ರಾಜ್ಯ ಪ್ರವೇಶಿಸುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂದು ನಾನು ನಿಮಗೆ ಹೇಳುತ್ತೇನೆ” ಎಂದನು.
25 ಶಿಷ್ಯರು ಇದನ್ನು ಕೇಳಿ ಬಹಳ ಆಶ್ಚರ್ಯದಿಂದ, “ಹಾಗಾದರೆ ಯಾರು ರಕ್ಷಣೆ ಹೊಂದಬಲ್ಲರು?” ಎಂದು ಕೇಳಿದರು.
26 ಯೇಸು ತನ್ನ ಶಿಷ್ಯರ ಕಡೆಗೆ ದೃಷ್ಟಿಸಿ, “ಇದು ಮನುಷ್ಯರಿಗೆ ಅಸಾಧ್ಯವಾದ ಕಾರ್ಯ. ಆದರೆ ದೇವರಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
27 ಪೇತ್ರನು ಯೇಸುವಿಗೆ, “ನಾವು ನಮಗಿದ್ದ ಪ್ರತಿಯೊಂದನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು. ನಮಗೆ ಏನು ದೊರಕುವುದು” ಎಂದನು.
28 ಯೇಸು ಶಿಷ್ಯರಿಗೆ ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. 29 ನನ್ನನ್ನು ಹಿಂಬಾಲಿಸಲು ತಮ್ಮ ಮನೆಗಳನ್ನು, ಸಹೋದರ ಸಹೋದರಿಯರನ್ನು, ತಂದೆತಾಯಿಗಳನ್ನು, ಮಕ್ಕಳನ್ನು ಇಲ್ಲವೆ ಆಸ್ತಿಯನ್ನು ತ್ಯಜಿಸಿದ ಪ್ರತಿಯೊಬ್ಬರು ತಾವು ಬಿಟ್ಟವುಗಳಿಗಿಂತ ಹೆಚ್ಚಾಗಿ ಪಡೆಯುತ್ತಾರೆ. ಅಲ್ಲದೆ ನಿತ್ಯಜೀವವನ್ನೂ ಹೊಂದಿಕೊಳ್ಳುತ್ತಾರೆ. 30 ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.
Kannada Holy Bible: Easy-to-Read Version. All rights reserved. © 1997 Bible League International