Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 31:1-5

ರಚನೆಗಾರ: ದಾವೀದ.

31 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ.
    ನನ್ನನ್ನು ನಿರಾಶೆಗೊಳಿಸಬೇಡ.
    ಕರುಣೆತೋರಿ ನನ್ನನ್ನು ರಕ್ಷಿಸು.
    ನನಗೆ ಕಿವಿಗೊಡು.
    ಬೇಗನೆ ಬಂದು, ನನ್ನನ್ನು ರಕ್ಷಿಸು.
ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು
    ನನ್ನನ್ನು ಕಾಪಾಡು!
ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ
    ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು.
ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ.
    ಅವರ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು.
    ನೀನೇ ನನ್ನ ಆಶ್ರಯಸ್ಥಾನವಾಗಿರುವೆ.
ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ.
    ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ.
    ನನ್ನನ್ನು ರಕ್ಷಿಸು!

ಕೀರ್ತನೆಗಳು 31:19-24

19 ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ.
    ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ
    ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.
20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ.
    ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ;
    ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.
21 ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ
    ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ.
22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು.
    ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.

23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು!
    ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು.
24 ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.

ಧರ್ಮೋಪದೇಶಕಾಂಡ 30:1-5

ಇಸ್ರೇಲರು ತಮ್ಮ ಸ್ವದೇಶಕ್ಕೆ ಹಿಂದಿರುಗುವರು

30 “ನಾನು ಈಗ ಹೇಳಿದ್ದೆಲ್ಲವೂ ನಿಮಗೆ ಸಂಭವಿಸುವುದು. ಆಶೀರ್ವಾದದ ಮೂಲಕ ನಿಮಗೆ ಶುಭವಾಗುವದು; ಶಾಪದಿಂದ ನಿಮಗೆ ಅಶುಭವಾಗುವುದು. ನಮ್ಮ ದೇವರಾದ ಯೆಹೋವನು ಇತರ ದೇಶಗಳಿಗೆ ನಿಮ್ಮನ್ನು ಕಳುಹಿಸಿ ಬಿಡುವನು. ಆಗ ನೀವು ಇವುಗಳನ್ನೆಲ್ಲಾ ನೆನಸುವಿರಿ. ನೀವೂ ನಿಮ್ಮ ಸಂತತಿಯವರೂ ಯೆಹೋವನ ಬಳಿಗೆ ಬರುವಿರಿ. ನಿಮ್ಮ ಹೃದಯಪೂರ್ವಕವಾಗಿ ಆತನನ್ನು ಹಿಂಬಾಲಿಸುವಿರಿ ಮತ್ತು ಆಜ್ಞೆಗಳಿಗೆ ಸಂಪೂರ್ಣವಾಗಿ ವಿಧೇಯರಾಗುವಿರಿ. ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು. ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು. ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು.

ರೋಮ್ನಗರದವರಿಗೆ 9:6-13

ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು”(A) ಎಂದು ಹೇಳಿದನು. ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ನೇಮಿತ ಕಾಲದಲ್ಲಿ ನಾನು ಹಿಂತಿರುಗಿಬರುವೆನು, ಆಗ ಸಾರಳಿಗೆ ಒಬ್ಬ ಮಗನಿರುವನು”(B) ಎಂಬ ವಾಗ್ದಾನ ಮಾಡಿದ್ದನು.

10 ಅದಷ್ಟೇ ಅಲ್ಲ, ರೆಬೆಕ್ಕಳಿಗೂ ಇಬ್ಬರು ಗಂಡುಮಕ್ಕಳಿದ್ದರು. ಅವರಿಬ್ಬರಿಗೂ ಒಬ್ಬನೇ ತಂದೆ. ಅವನೇ ನಮ್ಮ ಪಿತೃವಾದ ಇಸಾಕನು. 11-12 ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು”(C) ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ. 13 ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು”(D) ಎಂದು ಪವಿತ್ರ ಗ್ರಂಥವು ಹೇಳುತ್ತದೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International