Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 67

ಸ್ತುತಿಗೀತೆ.

67 ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು.
    ಪ್ರಸನ್ನಮುಖದಿಂದ ನಮ್ಮನ್ನು ನೋಡು.

ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ.
    ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.
ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ!
    ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ.
    ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ;
    ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.
ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ!
    ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!
ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು.
    ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.
ಆತನು ನಮ್ಮನ್ನು ಆಶೀರ್ವದಿಸಲಿ.
    ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.

ಯೆಶಾಯ 45:20-25

ಯೆಹೋವನೊಬ್ಬನೇ ದೇವರು

20 “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು. 21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.)

“ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ! 22 ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.

23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು. 24 ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’”

ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು. 25 ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.

ಪ್ರಕಟನೆ 15:1-4

ದೇವದೂತರಿಂದ ಕೊನೆಯ ಉಪದ್ರವಗಳು

15 ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.

ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು. ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು:

“ಪ್ರಭುವೇ, ಸರ್ವಶಕ್ತನಾದ ದೇವರೇ,
    ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ.
ಸರ್ವಜನಾಂಗಗಳ ರಾಜನೇ,
    ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ;
ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ.
    ನೀನು ಮಾತ್ರ ಪರಿಶುದ್ಧನಾದವನು.
ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ
    ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International