Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 138

ಸ್ತುತಿಗೀತೆ. ರಚನೆಗಾರ: ದಾವೀದ.

138 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು.
    ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು.
    ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು.
ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ
    ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.

ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ
    ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.
ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು;
    ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು.
ಯೆಹೋವನೇ ಮಹೋನ್ನತನು.
    ಆದರೂ ಆತನು ದೀನರಿಗೋಸ್ಕರ ಚಿಂತಿಸುವನು.
ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ.
    ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು.
    ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು.
    ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು.
ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!

ಯೆಹೆಜ್ಕೇಲ 36:33-38

33 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು. 34 ಜನರು ಹೊಲದಲ್ಲಿ ತಿರುಗಿ ಕೆಲಸ ಮಾಡಲು ಪ್ರಾರಂಭಿಸುವರು. ದಾಟಿಹೋಗುವ ಜನರು ಇನ್ನು ಮೇಲೆ ಪಾಳುಬಿದ್ದ ಕುರುಹುಗಳನ್ನು ಕಾಣರು. 35 ‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.

36 ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”

37 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಬೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು. 38 ಹಬ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”

ಮತ್ತಾಯ 16:5-12

ಯೆಹೂದ್ಯನಾಯಕರ ಬಗ್ಗೆ ಯೇಸು ನೀಡಿದ ಎಚ್ಚರಿಕೆ

(ಮಾರ್ಕ 8:14-21)

ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು[a] ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು. ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.

ಶಿಷ್ಯರು ಇದರ ಅರ್ಥವನ್ನು ಚರ್ಚಿಸಿದರು. ಅವರು, “ನಾವು ರೊಟ್ಟಿ ತರಲು ಮರೆತುಬಿಟ್ಟದ್ದಕ್ಕಾಗಿ ಯೇಸು ಹೀಗೆ ಹೇಳಿರಬಹುದೆ?” ಎಂದು ಮಾತಾಡಿಕೊಂಡರು.

ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ, ನೀವಿನ್ನೂ ಅರ್ಥಮಾಡಿಕೊಳ್ಳಲಿಲ್ಲವೇ? ಐದು ರೊಟ್ಟಿಗಳಿಂದ ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ಊಟ ಮಾಡಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ? 10 ಏಳು ರೊಟ್ಟಿಗಳ ತುಂಡುಗಳನ್ನು ನಾಲ್ಕು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ತಿಂದು ಮುಗಿಸಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ? 11 ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.

12 ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International