Print Page Options
Previous Prev Day Next DayNext

Revised Common Lectionary (Complementary)

Daily Bible readings that follow the church liturgical year, with thematically matched Old and New Testament readings.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 130

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

130 ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ;
    ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ.
ನನ್ನ ಒಡೆಯನೇ, ನನಗೆ ಕಿವಿಗೊಡು.
    ನನ್ನ ಮೊರೆಯನ್ನು ಆಲಿಸು.
ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ
    ಒಬ್ಬನೂ ಜೀವಂತವಾಗಿ ಉಳಿಯಲಾರ.
ಯೆಹೋವನೇ, ನಿನ್ನ ಜನರನ್ನು ಕ್ಷಮಿಸು.
    ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.

ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ.
    ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು.
    ಆತನು ನುಡಿಯನ್ನು ನಂಬಿಕೊಂಡಿದ್ದೇನೆ.
ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ
    ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ.
ಇಸ್ರೇಲೇ, ಯೆಹೋವನಲ್ಲಿ ಭರವಸವಿಡು.
    ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ.
ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.
    ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು.

ಧರ್ಮೋಪದೇಶಕಾಂಡ 1:34-40

ಜನರನ್ನು ಕಾನಾನ್ ದೇಶದೊಳಗೆ ಹೋಗದಂತೆ ಮಾಡಿದ್ದು

34 “ನೀವು ಹೇಳುತ್ತಿದ್ದದ್ದನ್ನು ಯೆಹೋವನು ಕೇಳಿ ಸಿಟ್ಟುಗೊಂಡು, 35 ‘ಈಗ ಜೀವಿಸುತ್ತಿರುವ ದುಷ್ಟಜನರಾದ ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ. 36 ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.

37 “ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ. 38 ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು. 39 ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು. 40 ಆದರೆ ನೀವು ಹಿಂತಿರುಗಿ ಕೆಂಪುಸಮುದ್ರಕ್ಕೆ ಹೋಗುವ ಮರುಭೂಮಿಯ ಮಾರ್ಗದಲ್ಲಿ ಹೋಗಬೇಕು.’

2 ಕೊರಿಂಥದವರಿಗೆ 5:1-5

ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ. ಆದರೆ ಈಗ ನಾವು ಈ ದೇಹದಲ್ಲಿ ಬಳಲಿ ಹೋಗಿದ್ದೇವೆ. ಪರಲೋಕದಲ್ಲಿರುವ ನಮ್ಮ ಮನೆಯನ್ನು ದೇವರು ನಮಗೆ ಯಾವಾಗ ಕೊಡುವನೊ ಎಂದು ಹಾತೊರೆಯುತ್ತಿದ್ದೇವೆ. ನಾವು ಅದನ್ನು ಧರಿಸಿಕೊಂಡಾಗ ಬೆತ್ತಲೆಯಾಗಿರುವುದಿಲ್ಲ. ಈ ಗುಡಾರದಲ್ಲಿರುವ ತನಕ ನಮಗೆ ಭಾರವಾದ ಹೊರೆಗಳಿವೆ ಮತ್ತು ನಾವು ನರಳುತ್ತೇವೆ. ಬೆತ್ತಲೆಯಾಗಿರಲು ನಾವು ಇಷ್ಟಪಡದೆ ಪರಲೋಕದ ಮನೆಯನ್ನು ಧರಿಸಿಕೊಳ್ಳಲು ಇಷ್ಟಪಡುತ್ತೇವೆ. ಸತ್ತುಹೋಗುವ ಈ ದೇಹವನ್ನು ಜೀವವು ಪೂರ್ಣವಾಗಿ ಆವರಿಸಿಕೊಳ್ಳುವುದು. ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International