Revised Common Lectionary (Complementary)
ಸ್ತುತಿಗೀತೆ. ರಚನೆಗಾರ: ದಾವೀದ.
138 ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು.
ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು.
ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು.
ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
3 ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ
ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ
ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.
5 ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು;
ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು.
6 ಯೆಹೋವನೇ ಮಹೋನ್ನತನು.
ಆದರೂ ಆತನು ದೀನರಿಗೋಸ್ಕರ ಚಿಂತಿಸುವನು.
ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ.
ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
7 ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು.
ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
8 ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು.
ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು.
ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
ರಾಜಹತ್ಯೆಯ ಒಳಸಂಚನ್ನು ಮೊರ್ದೆಕೈ ಬಯಲುಪಡಿಸಿದ್ದು
19 ಕನ್ಯೆಯರು ಎರಡನೆ ಸಲ ಸಭೆ ಸೇರಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು. 20 ಮೊರ್ದೆಕೈ ಎಸ್ತೇರಳಿಗೆ ಹೇಳಿದ ಮೇರೆಗೆ ಆಕೆ ತನ್ನ ಪೂರ್ವಿಕರ ದೇಶದ ಬಗ್ಗೆಯಾಗಲಿ ತನ್ನ ಕುಟುಂಬದ ಹಿನ್ನಲೆಯ ಬಗ್ಗೆಯಾಗಲಿ ಯಾರಿಗೂ ಹೇಳಲಿಲ್ಲ. ಹಿಂದೆ ಆಕೆ ಹೇಗೆ ಮೊರ್ದೆಕೈ ಹೇಳಿದ ಪ್ರಕಾರ ನಡೆದುಕೊಳ್ಳುತ್ತಿದ್ದಳೋ ಹಾಗೆಯೇ ಈಗಲೂ ನಡೆದುಕೊಳ್ಳುತ್ತಿದ್ದಳು.
21 ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು. 22 ಮೊರ್ದೆಕೈಗೆ ಈ ವಿಷಯ ಗೊತ್ತಾದಾಗ ಅವನು ಅದನ್ನು ಎಸ್ತೇರಳಿಗೆ ತಿಳಿಸಿದನು. ಎಸ್ತೇರ್ ರಾಣಿಯು ಇದನ್ನು ಕೊಡಲೇ ಅರಸನಿಗೆ ತಿಳಿಸಿದಳು. ಅಷ್ಟೇ ಅಲ್ಲ, ಮೊರ್ದೆಕೈ ಎಂಬವನು ಈ ಒಳಸಂಚನ್ನು ಕಂಡುಹಿಡಿದು ತನಗೆ ತಿಳಿಸಿದನು ಎಂಬದಾಗಿಯೂ ಅರಸನಿಗೆ ವರದಿ ಮಾಡಿದಳು. 23 ಕೂಡಲೇ ವಿಚಾರಣೆ ನಡೆಸಿದಾಗ ಮೊರ್ದೆಕೈಯು ಹೇಳಿದ ವಿಷಯವು ಸತ್ಯ ಎಂದು ಗೊತ್ತಾಯಿತು. ಆ ಎರಡು ದ್ವಾರಪಾಲಕರನ್ನು ಹಿಡಿದು ಗಲ್ಲಿಗೇರಿಸಿದರು. ಈ ಎಲ್ಲಾ ಸಮಾಚಾರವನ್ನು ರಾಜನ ಬಳಿಯಲ್ಲಿರುವ ರಾಜಕಾಲ ವೃತ್ತಾಂತ ಪುಸ್ತಕದಲ್ಲಿ ಬರೆಯಲ್ಪಟ್ಟವು.
ಯೆಹೂದ್ಯರನ್ನು ನಿರ್ಮೂಲ ಮಾಡಲು ಹಾಮಾನನ ಸಂಚು
3 ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು. 2 ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊರ್ದೆಕೈ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ. 3 ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದ ಅಧಿಕಾರಿಗಳು, “ಮೊರ್ದೆಕೈ, ಅರಸನ ಆಜ್ಞೆಯ ಪ್ರಕಾರ ಹಾಮಾನನಿಗೆ ನೀನು ಏಕೆ ಬಗ್ಗಿ ನಮಸ್ಕರಿಸುವುದಿಲ್ಲ?” ಎಂದು ಪ್ರಶ್ನಿಸಿದರು.
4 ಪ್ರತಿದಿನ ಆ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು. 5 ಮೊರ್ದೆಕೈ ತನಗೆ ಅಡ್ಡಬೀಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು. 6 ಮೊರ್ದೆಕೈ ಯೆಹೂದ್ಯ ಜನಾಂಗಕ್ಕೆ ಸೇರಿದವನೆಂದು ಹಾಮಾನನಿಗೆ ತಿಳಿದುಬಂತು. ಕೇವಲ ಮೊರ್ದೆಕೈಯನ್ನು ಮಾತ್ರವೇ ಕೊಲ್ಲದೆ ಅಹಷ್ವೇರೋಷನ ಸಾಮ್ರಾಜ್ಯದಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೊಲ್ಲುವ ಉಪಾಯವನ್ನು ಹೂಡಿದನು.
15 ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು: 16-17 “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ[a] ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”
18 (ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು. 19 ಇದರ ಬಗ್ಗೆ ಜೆರುಸಲೇಮಿನ ಜನರೆಲ್ಲರಿಗೂ ತಿಳಿಯಿತು. ಆದಕಾರಣವೇ ಅವರು ಆ ಹೊಲಕ್ಕೆ ಅಕೆಲ್ದಮಾ ಎಂದು ಹೆಸರಿಟ್ಟರು. ಅವರ ಭಾಷೆಯಲ್ಲಿ ಅಕೆಲ್ದಮಾ ಅಂದರೆ “ರಕ್ತದ ಹೊಲ” ಎಂದರ್ಥ.)
20 ‘ಅವನ ಮನೆ ಹಾಳಾಗಲಿ!
ಅಲ್ಲಿ ಯಾರೂ ವಾಸಿಸದಂತಾಗಲಿ!’(A)
ಎಂದು ಕೀರ್ತನೆಗಳ ಪುಸ್ತಕದಲ್ಲಿ ಯೂದನ ಬಗ್ಗೆ ಬರೆದಿದೆ.
ಅಲ್ಲದೆ ‘ಬೇರೊಬ್ಬನು ಅವನ ಕೆಲಸವನ್ನು ಪಡೆದುಕೊಳ್ಳಲಿ’(B)
ಎಂದು ಸಹ ಬರೆದಿದೆ.
Kannada Holy Bible: Easy-to-Read Version. All rights reserved. © 1997 Bible League International