Revised Common Lectionary (Complementary)
6 ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ. 7 ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.
112 ಯೆಹೋವನಿಗೆ ಸ್ತೋತ್ರವಾಗಲಿ!
ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ
ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.
2 ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು;
ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.
3 ಅವನ ಕುಟುಂಬದವರು ಐಶ್ವರ್ಯವಂತರಾಗುವರು.
ಅವನ ನೀತಿಯು ಶಾಶ್ವತವಾಗಿರುವುದು.
4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು.
ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.
5 ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು.
ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.
6 ಅವನೆಂದಿಗೂ ಬೀಳುವುದಿಲ್ಲ.
ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.
7 ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ.
ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.
8 ಅವನ ಮನಸ್ಸು ದೃಢವಾಗಿರುವುದರಿಂದ
ಅವನು ಭಯಪಡದೆ, ತನ್ನ ಶತ್ರುಗಳನ್ನು ಸೋಲಿಸುವನು.
9 ಅವನು ಬಡವರಿಗೆ ಉದಾರವಾಗಿ ಕೊಡುವನು.
ಅವನ ಸತ್ಕಾರ್ಯಗಳು ಶಾಶ್ವತವಾಗಿವೆ.
ಅವನು ಗೌರವವನ್ನು ಪಡೆದುಕೊಳ್ಳುವನು.
10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು;
ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು.
ಅವರ ದುರಾಶೆಯು ಈಡೇರದು.
ದೇವರಿಗೆ ಮೆಚ್ಚಿಕೆಯಾದ ಆರಾಧನೆ
13 ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. 2 ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. 3 ಸೆರೆಮನೆಯಲ್ಲಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸೆರೆಮನೆಯಲ್ಲಿದ್ದೀರೋ ಎಂಬಂತೆ ನೆನಪುಮಾಡಿಕೊಳ್ಳಿ ಮತ್ತು ಸಂಕಟಕ್ಕೊಳಗಾಗಿರುವ ಜನರನ್ನು ಮರೆಯದಿರಿ. ನೀವೂ ಅವರ ಜೊತೆಯಲ್ಲಿ ಸಂಕಟಪಡುತ್ತಿರುವಿರೋ ಎಂಬಂತೆ ನೆನಪು ಮಾಡಿಕೊಳ್ಳಿ.
4 ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ. 5 ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ:
“ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ.
ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”(A)
6 ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು:
“ಪ್ರಭುವೇ ನನ್ನ ಸಹಾಯಕನು;
ನಾನು ಹೆದರುವುದಿಲ್ಲ.
ಜನರು ನನಗೆ ಏನೂ ಮಾಡಲಾರರು.”(B)
7 ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ. 8 ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.
15 ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. 16 ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.
ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ?
14 ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
ನಿನ್ನನ್ನು ಪ್ರಮುಖನನ್ನಾಗಿ ಮಾಡಿಕೊಳ್ಳಬೇಡ
7 ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು: 8 “ಒಬ್ಬನು ನಿನ್ನನ್ನು ಮದುವೆಗೆ ಆಮಂತ್ರಿಸಿದರೆ, ಉನ್ನತವಾದ ಆಸನದಲ್ಲಿ ಕುಳಿತುಕೊಳ್ಳಬೇಡ. ಅವನು ನಿನಗಿಂತಲೂ ಪ್ರಮುಖನಾದವನನ್ನು ಆಮಂತ್ರಿಸಿದ್ದಿರಬಹುದು. 9 ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ‘ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು’ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
10 “ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ‘ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!’ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು. 11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
ನಿಮಗೆ ಪ್ರತಿಫಲ ದೊರೆಯುವುದು
12 ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು. 13 ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು. 14 ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International