Revised Common Lectionary (Semicontinuous)
ದೇವಾಲಯದ ಪ್ರತಿಷ್ಠೆಗಾಗಿ ರಚಿಸಲ್ಪಟ್ಟಿದೆ. ರಚನೆಗಾರ: ದಾವೀದ.
30 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ;
ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ;
ಆದ್ದರಿಂದ ನಿನ್ನನ್ನು ಕೊಂಡಾಡುವೆನು.
2 ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ
ನೀನು ನನ್ನನ್ನು ಗುಣಪಡಿಸಿದೆ.
3 ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ;
ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.[a]
4 ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ!
ಆತನ ಪರಿಶುದ್ಧ ಹೆಸರನ್ನು[b] ಕೊಂಡಾಡಿರಿ.
5 ಆತನ ಕೋಪವು ಕ್ಷಣಮಾತ್ರವಿರುವುದು.
ಆತನ ಪ್ರೀತಿಯಾದರೋ ಶಾಶ್ವತವಾದದ್ದು.
ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ
ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.
6 ನಾನು ಸುರಕ್ಷಿತವಾಗಿದ್ದಾಗ
ನನಗೆ ಕೇಡೇ ಇಲ್ಲವೆಂದುಕೊಂಡೆನು.
7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ
ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು.
ಆದರೆ ನೀನು ನನಗೆ ವಿಮುಖನಾದಾಗ
ಭಯದಿಂದ ನಡುಗತೊಡಗಿದೆ.
8 ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ;
ಕರುಣೆತೋರು ಎಂದು ನಿನ್ನನ್ನು ಕೇಳಿಕೊಂಡೆ.
9 “ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ,
ಅದರಿಂದ ಒಳ್ಳೆಯದೇನಾದೀತು?
ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು!
ಅವರು ನಿನ್ನನ್ನು ಸ್ತುತಿಸುವುದಿಲ್ಲ!
ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
10 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು!
ಯೆಹೋವನೇ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡೆನು.
11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು
ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ.
ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ
ಹರ್ಷವಸ್ತ್ರಗಳನ್ನು ಹೊದಿಸಿದೆ.
12 ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು.
ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.
ಚರ್ಮರೋಗಗಳ ಕುರಿತು ನಿಯಮಗಳು
13 ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ: 2 “ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು. 3 ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡಬೇಕು. ಮಚ್ಚೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಮಚ್ಚೆಯು ಅವನ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಪರೀಕ್ಷಿಸಿದ ನಂತರ ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು.
4 “ಕೆಲವು ಬಾರಿ ಒಬ್ಬ ವ್ಯಕ್ತಿಯ ಚರ್ಮದ ಮೇಲೆ ಬಿಳಿ ಮಚ್ಚೆ ಇರುತ್ತದೆ. ಆದರೆ ಮಚ್ಚೆಯು ಚರ್ಮಕ್ಕಿಂತ ತಗ್ಗಾಗಿರದಿದ್ದರೆ ಮತ್ತು ಅದರ ರೋಮ ಬೆಳ್ಳಗಾಗಿಲ್ಲದಿದ್ದರೆ ಯಾಜಕನು ಅವನನ್ನು ಬೇರೆ ಜನರಿಂದ ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು. 5 ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬದಲಾಗದೆ ಚರ್ಮದ ಮೇಲೆ ಹರಡಲಿಲ್ಲವೆಂದು ಯಾಜಕನು ಕಂಡರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೆ ಇತರ ಜನರಿಂದ ಪ್ರತ್ಯೇಕಿಸಬೇಕು. 6 ಏಳು ದಿನಗಳ ನಂತರ ಯಾಜಕನು ಮತ್ತೆ ಅವನನ್ನು ನೋಡಬೇಕು. ಮಚ್ಚೆಯು ಮೊಬ್ಬಾಗಿ ಚರ್ಮದಲ್ಲಿ ಹರಡದೆ ಇದ್ದರೆ, ಆಗ ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಯಾಕೆಂದರೆ ಮಚ್ಚೆಯು ಕೇವಲ ಗುಳ್ಳೆಯಾಗಿದೆ. ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ತಿರುಗಿ ಶುದ್ಧನಾಗುವನು.
7 “ಆದರೆ ಆ ವ್ಯಕ್ತಿಯ ಗುಳ್ಳೆಯು ಚರ್ಮದ ಮೇಲೆ ಹೆಚ್ಚಾಗಿ ಹರಡಿದರೆ, ಆ ವ್ಯಕ್ತಿಯು ಯಾಜಕನ ಬಳಿಗೆ ಮತ್ತೆ ಬರಬೇಕು. 8 ಯಾಜಕನು ಪರೀಕ್ಷಿಸಿದಾಗ ಗುಳ್ಳೆಯು ಚರ್ಮದ ಮೇಲೆ ಹರಡಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ಕುಷ್ಠರೋಗವಾಗಿದೆ.
9 “ಒಬ್ಬನಿಗೆ ಕುಷ್ಠವಿದ್ದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. 10 ಯಾಜಕನು ಆ ವ್ಯಕ್ತಿಯನ್ನು ನೋಡಬೇಕು. ಚರ್ಮದ ಮೇಲೆ ಬೆಳ್ಳಗಾದ ಊತವಿದ್ದರೆ, ರೋಮವು ಬೆಳ್ಳಗಾಗಿದ್ದರೆ ಮತ್ತು ಚರ್ಮವು ಊತದಿಂದ ಹಸಿಯಾಗಿ ಕಂಡರೆ, 11 ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ಆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.
12 “ಕೆಲವು ಬಾರಿ ಚರ್ಮರೋಗವು ಒಬ್ಬನ ಮೈಯೆಲ್ಲಾ ಹರಡಿಕೊಳ್ಳುವುದು. ಚರ್ಮರೋಗವು ಅವನನ್ನು ತಲೆಯಿಂದ ಅಂಗಾಲಿನವರೆಗೂ ಮುಚ್ಚಿಕೊಳ್ಳುವುದು. ಯಾಜಕನು ಆ ವ್ಯಕ್ತಿಯ ಇಡೀ ದೇಹವನ್ನು ನೋಡಬೇಕು. 13 ಚರ್ಮರೋಗವು ಇಡೀ ದೇಹವನ್ನು ವ್ಯಾಪಿಸಿ ಆ ವ್ಯಕ್ತಿಯ ಚರ್ಮವು ಬಿಳಿ ಬಣ್ಣಕ್ಕೆ ತಿರುಗಿರುವುದನ್ನು ಯಾಜಕನು ಕಂಡರೆ, ಆ ವ್ಯಕ್ತಿಯು ಶುದ್ಧನೆಂದು ಯಾಜಕನು ಪ್ರಕಟಿಸಬೇಕು. 14 ಆದರೆ ಆ ವ್ಯಕ್ತಿಯ ಚರ್ಮವು ಹಸಿಯಾಗಿದ್ದರೆ, ಆ ವ್ಯಕ್ತಿಯು ಶುದ್ಧನಲ್ಲ. 15 ಯಾಜಕನು ಹಸಿಯಾದ ಚರ್ಮವನ್ನು ನೋಡಿದಾಗ, ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಹಸಿಯಾದ ಚರ್ಮವು ಶುದ್ಧವಲ್ಲ. ಅದು ಕುಷ್ಠರೋಗವಾಗಿದೆ.
16 “ಹಸಿಯಾದ ಚರ್ಮವು ಬದಲಾಗಿ ಬಿಳಿಯಾದರೆ, ಆಗ ಆ ವ್ಯಕ್ತಿ ಯಾಜಕನ ಬಳಿಗೆ ಬರಬೇಕು. 17 ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಆ ವ್ಯಕ್ತಿಯು ಶುದ್ಧನಾಗಿದ್ದಾನೆ.
7 ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ. 8 ನೀವು ಎಂದೂ ಶಿಕ್ಷಿಸಲ್ಪಡದಿದ್ದರೆ ನಿಮ್ಮ ತಂದೆಗೆ ನೀವು ನಿಜವಾದ ಮಕ್ಕಳಲ್ಲ. 9 ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು. 10 ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ. 11 ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ಆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.
ಯೋಗ್ಯ ಮಾರ್ಗದಲ್ಲಿ ಜೀವಿಸಿರಿ
12 ನೀವು ದುರ್ಬಲರಾಗಿದ್ದೀರಿ. ಆದ್ದರಿಂದ ನಿಮ್ಮನ್ನು ಮತ್ತೆ ಬಲಪಡಿಸಿಕೊಳ್ಳಿರಿ. 13 ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ.
Kannada Holy Bible: Easy-to-Read Version. All rights reserved. © 1997 Bible League International