Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 119:33-40

33 ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು,
    ಆಗ ಅವುಗಳನ್ನು ಅನುಸರಿಸುವೆನು.
34 ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು.
    ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.
35 ನಿನ್ನ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸು.
    ಆ ಮಾರ್ಗವೇ ನನಗೆ ಬಹು ಇಷ್ಟ.
36 ಐಶ್ವರ್ಯದ ಮೇಲೆ ಮನಸ್ಸಿಡದೆ
    ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.
37 ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು.
    ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.
38 ನಿನ್ನ ಸೇವಕನಾದ ನನಗೆ ನೀನು ಮಾಡಿದ ವಾಗ್ದಾನಗಳನ್ನು ನೆರವೇರಿಸು.
    ಆಗ ಜನರು ನಿನ್ನನ್ನು ಗೌರವಿಸುವರು.
39 ಅವಮಾನವನ್ನು ನನ್ನಿಂದ ತೊಲಗಿಸು. ನಾನು ಅದಕ್ಕೆ ಹೆದರಿಕೊಂಡಿದ್ದೇನೆ.
    ನಿನ್ನ ಜ್ಞಾನದ ನಿರ್ಧಾರಗಳು ಒಳ್ಳೆಯವುಗಳಾಗಿವೆ.
40 ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು.
    ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.

ಯಾಜಕಕಾಂಡ 6:1-7

ಬೇರೆ ಪಾಪಗಳಿಗಾಗಿ ದೋಷಪರಿಹಾರಕ ಯಜ್ಞಗಳು

ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ, ಅವನು ತಾನು ಕದ್ದದ್ದನ್ನಾಗಲಿ ಮೋಸದಿಂದ ತೆಗೆದುಕೊಂಡದ್ದನ್ನಾಗಲಿ ಅಡವು ಇಟ್ಟುಕೊಂಡದ್ದನ್ನಾಗಲಿ ಕಂಡುಕೊಂಡ ಅಥವಾ ಕಳೆದುಹೋದ ವಸ್ತುವನ್ನಾಗಲಿ ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು. ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು. ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”

ಗಲಾತ್ಯದವರಿಗೆ 5:2-6

ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ. ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು. ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು. ಆದರೆ ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ ಎಂಬ ನಿರೀಕ್ಷೆ ನಮಗುಂಟು. ದೇವರಾತ್ಮನ ಸಹಾಯದಿಂದ ಈ ನಿರೀಕ್ಷೆ ಸಫಲವಾಗುವುದೆಂದು ತವಕದಿಂದ ಎದುರುನೋಡುತ್ತಿದ್ದೇವೆ. ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International