Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 131

ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.

131 ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ.
    ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ.
ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ
    ಮಾಡಲು ನಾನು ಪ್ರಯತ್ನಿಸುವುದಿಲ್ಲ.
ನಾನು ಸಮಾಧಾನದಿಂದಿರುವೆ.
    ನನ್ನ ಆತ್ಮವು ನೆಮ್ಮದಿಯಿಂದಿದೆ.
ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ
    ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.

ಇಸ್ರೇಲೇ, ಯೆಹೋವನಲ್ಲಿ ಭರವಸವಿಡು.
    ಈಗಲೂ ಆತನಲ್ಲಿ ಭರವಸವಿಡು.
    ಎಂದೆಂದಿಗೂ ಆತನಲ್ಲಿ ಭರವಸವಿಡು!

ಜ್ಞಾನೋಕ್ತಿಗಳು 12:22-28

22 ಸುಳ್ಳುಗಾರರು ಯೆಹೋವನಿಗೆ ಅಸಹ್ಯ. ಆದರೆ ಸತ್ಯವಂತರು ಆತನಿಗೆ ಇಷ್ಟಕರ.

23 ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.

24 ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.

25 ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.

26 ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.

27 ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.

28 ನೀತಿಯ ಮಾರ್ಗದಲ್ಲಿ ಜೀವವಿದೆ. ಆದರೆ ಮರಣಕ್ಕೆ ನಡೆಸುವ ಮತ್ತೊಂದು ಮಾರ್ಗವಿದೆ.

ಫಿಲಿಪ್ಪಿಯವರಿಗೆ 2:19-24

ತಿಮೊಥೆ ಮತ್ತು ಎಪಫ್ರೊದೀತರ ಸುದ್ದಿ

19 ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು. 20 ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ. 21 ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ. 22 ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು. 23 ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ. 24 ಅಲ್ಲದೆ ಪ್ರಭುವಿನ ಸಹಾಯದಿಂದ ನಿಮ್ಮ ಬಳಿಗೆ ಅದಷ್ಟು ಬೇಗನೆ ಬರುತ್ತೇನೆ ಎಂಬ ಭರವಸೆ ನನಗಿದೆ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International