Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 146:5-10

ಯಾರಿಗೆ ದೇವರು ಸಹಾಯಕನೋ,
    ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು.
ಯೆಹೋವನು ಆಕಾಶವನ್ನೂ ಭೂಮಿಯನ್ನೂ
    ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು.
ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ;
    ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.
    ಯೆಹೋವನು ಕುರುಡರಿಗೆ ದೃಷ್ಟಿಕೊಡುವನು.
ಯೆಹೋವನು ಕುಗ್ಗಿಹೋದವರನ್ನು ಉದ್ಧರಿಸುವನು.
    ಯೆಹೋವನು ನೀತಿವಂತರನ್ನು ಪ್ರೀತಿಸುವನು.
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ.
    ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ.
    ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.
10 ಯೆಹೋವನು ಸದಾಕಾಲ ಆಳುವನು!
    ಚೀಯೋನೇ, ನಿನ್ನ ದೇವರು ಶಾಶ್ವತವಾಗಿ ಆಳುವನು!

ಯೆಹೋವನಿಗೆ ಸ್ತೋತ್ರವಾಗಲಿ!

ರೂತಳು 4:13-17

13 ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡುಮಗುವಿಗೆ ಜನ್ಮಕೊಟ್ಟಳು. 14 ನಗರದ ಸ್ತ್ರೀಯರು ನೊವೊಮಿಗೆ, “ನಿನಗೆ ಈ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಇವನು ಇಸ್ರೇಲಿನಲ್ಲಿ ಸುಪ್ರಸಿದ್ಧನಾಗಲಿ. 15 ಅವನು ನಿನ್ನನ್ನು ಉಜ್ಜೀವಿಸಮಾಡುವನು. ವೃದ್ಧಾಪ್ಯದಲ್ಲಿ ನಿನ್ನ ಸಂರಕ್ಷಕನಾಗಿರಲಿ. ನಿನ್ನನ್ನು ಪ್ರೀತಿಸುವ ನಿನ್ನ ಸೊಸೆಯು ನಿನಗಾಗಿ ಈ ಮಗುವನ್ನು ಹೆತ್ತಿದ್ದಾಳೆ. ಅವಳು ನಿನಗೆ, ಏಳುಮಂದಿ ಗಂಡುಮಕ್ಕಳಿಗಿಂತಲೂ ಶ್ರೇಷ್ಠವಾಗಿದ್ದಾಳೆ” ಎಂದು ಹೇಳಿದರು.

16 ನೊವೊಮಿಯು ಆ ಮಗುವನ್ನು ತನ್ನ ಉಡಿಲಲ್ಲಿಟ್ಟುಕೊಂಡು ಸಾಕಿಸಲುಹಿದಳು. 17 ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಆ ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.

2 ಪೇತ್ರನು 3:11-18

11 ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು. 12 ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ. 13 ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.

14 ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ. 15 ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು. 16 ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.

17 ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ. 18 ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International