Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 93

93 ಯೆಹೋವನೇ ರಾಜನು.
    ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು.
    ಅದು ಕದಲುವುದೇ ಇಲ್ಲ.
ದೇವರೇ, ಆದಿಯಿಂದಲೂ ನಿನ್ನ ರಾಜ್ಯವು ಶಾಶ್ವತವಾಗಿದೆ.
    ಆದಿಯಿಂದಲೂ ಇರುವಾತನು ನೀನೊಬ್ಬನೇ!
ಯೆಹೋವನೇ, ನದಿಗಳ ಶಬ್ದವು ಮೊರೆಯುತ್ತಿದೆ.
    ರಭಸದಿಂದ ಬಡಿಯುತ್ತಿರುವ ಅಲೆಗಳು ಭೋರ್ಗರೆಯುತ್ತಿವೆ.
ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ.
    ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.
ಯೆಹೋವನೇ, ನಿನ್ನ ಕಟ್ಟಳೆಗಳು ಶಾಶ್ವತವಾಗಿವೆ.
    ನಿನ್ನ ಪವಿತ್ರಾಲಯವು ಬಹುಕಾಲದವರೆಗೆ ಇರುತ್ತದೆ.

ಧರ್ಮೋಪದೇಶಕಾಂಡ 7:1-11

ಇಸ್ರೇಲ್, ದೇವಜನಾಂಗ

“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು. ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ. ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅವರನ್ನು ಮದುವೆಯಾಗಬಾರದು. ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು.

ಸುಳ್ಳುದೇವರುಗಳನ್ನು ನಾಶಮಾಡಿರಿ

“ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು. ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ. ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ, ನಿಜವಾಗಿಯೂ ನೀವು ಚಿಕ್ಕ ಜನಾಂಗವೇ. ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.

“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು. 10 ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ. 11 ಆದ್ದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು.

1 ತಿಮೊಥೆಯನಿಗೆ 6:11-12

ನೀವು ನೆನಪಿನಲ್ಲಿಡಬೇಕಾದ ಕೆಲವು ಸಂಗತಿಗಳು

11 ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು. 12 ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International