Revised Common Lectionary (Semicontinuous)
ಮೂರನೆ ಭಾಗ
(ಕೀರ್ತನೆಗಳು 73–89)
ಸ್ತುತಿಗೀತೆ. ರಚನೆಗಾರ: ಆಸಾಫ.
73 ದೇವರು ಇಸ್ರೇಲಿಗೆ ಒಳ್ಳೆಯವನೇ ನಿಜ!
ಶುದ್ಧ ಹೃದಯವುಳ್ಳವರಿಗೆ ದೇವರು ಒಳ್ಳೆಯವನೇ ಸರಿ!
2 ಆದರೆ ನನ್ನ ಕಾಲುಗಳು ಜಾರಿದವು;
ನನ್ನ ಹೆಜ್ಜೆಗಳು ತಪ್ಪಿದವು.
3 ದುಷ್ಟರ ಏಳಿಗೆಯನ್ನು ಕಂಡು
ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.
4 ಅವರು ಆರೋಗ್ಯವಂತರಾಗಿದ್ದಾರೆ.
ಜೀವನೋಪಾಯಕ್ಕಾಗಿ ಅವರು ಹೋರಾಡಬೇಕಿಲ್ಲ.[a]
5 ಆ ಗರ್ವಿಷ್ಠರು ನಮ್ಮಂತೆ ಕಷ್ಟಪಡುವುದಿಲ್ಲ.
ಅವರಿಗೆ ಬೇರೆಯವರಂತೆ ತೊಂದರೆಗಳಿಲ್ಲ.
6 ಆದ್ದರಿಂದ ಗರ್ವವು ಅವರಿಗೆ ಆಭರಣವಾಗಿದೆ;
ದ್ವೇಷವು ಅವರಿಗೆ ಉಡುಪಾಗಿದೆ.
7 ಅವರ ಕಣ್ಣುಗಳು ಕೊಬ್ಬಿವೆ;
ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ.
8 ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು.
ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.
9 ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ,
ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ.
10 ಆದ್ದರಿಂದ ದೇವರ ಮಕ್ಕಳೂ ಅವರ ಪಕ್ಷ ಹಿಡಿಯುವರು;
ಅವರು ಹೇಳಿದಂತೆಯೇ ಮಾಡುವರು.
11 “ನಮ್ಮ ಕಾರ್ಯಗಳು ದೇವರಿಗೆ ಗೊತ್ತಿಲ್ಲ! ಮಹೋನ್ನತನಾದ ದೇವರಿಗೆ ಗೊತ್ತೇ ಇಲ್ಲ!”
ಎಂದು ಆ ದುಷ್ಟರು ಹೇಳಿಕೊಳ್ಳುವರು.
12 ಆ ಗರ್ವಿಷ್ಠರು ದುಷ್ಟರೇ ಸರಿ!
ಆದರೂ ಅವರ ಐಶ್ವರ್ಯವು ಹೆಚ್ಚಾಗುತ್ತಲೇ ಇದೆ.
13 ಹೀಗಿರಲು, ನನ್ನ ಹೃದಯವನ್ನು ನಾನೇಕೆ ನಿರ್ಮಲಗೊಳಿಸಿಕೊಳ್ಳಲಿ?
ನನ್ನ ಕೈಗಳನ್ನು ನಾನೇಕೆ ಸ್ವಚ್ಛಗೊಳಿಸಿಕೊಳ್ಳಲಿ?
14 ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ.
ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ.
15 ಇವುಗಳ ಬಗ್ಗೆ ನಾನು ಬೇರೆಯವರಿಗೆ ಹೇಳಬೇಕೆಂದಿದ್ದೆ.
ಒಂದುವೇಳೆ ಹೇಳಿದ್ದರೆ, ನಿನ್ನ ಜನರಿಗೆ ದ್ರೋಹಿಯಾಗುತ್ತಿದ್ದೆ.
16 ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ
ನಿನ್ನ ಆಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು.
17 ಆದರೆ ನಿನ್ನ ಆಲಯಕ್ಕೆ ಹೋದಮೇಲೆ
ನನಗೆ ಅರ್ಥವಾಯಿತು.
18 ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ.
ಅವರು ಸುಲಭವಾಗಿ ಬಿದ್ದು ನಾಶವಾಗುವರು.
19 ಇದ್ದಕ್ಕಿದ್ದಂತೆ ಆಪತ್ತು ಬರುವುದು,
ಆಗ ಆ ಗರ್ವಿಷ್ಠರು ನಾಶವಾಗುವರು.
ಭಯಂಕರವಾದ ಸಂಗತಿಗಳು ಅವರಿಗೆ ಸಂಭವಿಸುತ್ತವೆ;
ಆಗ ಅವರು ಅಂತ್ಯಗೊಳ್ಳುವರು.
20 ಯೆಹೋವನೇ, ನಾವು ನಿದ್ರೆಯಿಂದ ಎಚ್ಚರಗೊಂಡಾಗ
ಮರೆತುಬಿಡುವ ಕನಸಿನಂತಿದ್ದಾರೆ ಆ ಜನರು.
ನಾವು ಕನಸಿನಲ್ಲಿ ಕಾಣುವ ರಾಕ್ಷಸರಂತೆ
ನೀನು ಅವರನ್ನು ಮಾಯಗೊಳಿಸುವೆ.
14 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಆದರೆ ಜ್ಞಾನಹೀನಳು ತನ್ನ ಕೈಯಿಂದಲೇ ಅದನ್ನು ಬೀಳಿಸುವಳು.
2 ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.
3 ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೋ ಅವನನ್ನು ಕಾಪಾಡುತ್ತವೆ.
4 ಎತ್ತುಗಳಿಲ್ಲದಿದ್ದರೆ ಕೊಟ್ಟಿಗೆ ಬರಿದಾಗಿರುವುದು. ದೊಡ್ಡ ಸುಗ್ಗಿಪಡೆಯಲು ಎತ್ತಿನ ಶಕ್ತಿ ಜನರಿಗೆ ಅಗತ್ಯ.
5 ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು.
6 ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.
7 ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ.
8 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.
9 ಮೂಢರಿಗೆ ಪ್ರಾಯಶ್ಚಿತ್ತವು ಹಾಸ್ಯಾಸ್ಪದವಾಗಿದೆ; ಯಥಾರ್ಥವಂತರು ಕ್ಷಮೆಗಾಗಿ ಶ್ರಮಿಸುವರು.
ಯೇಸುವಿನಿಂದ ಕಾಯಿಲೆಯ ಬಾಲಕನಿಗೆ ಸ್ವಸ್ಥತೆ
(ಮಾರ್ಕ 9:14-29; ಲೂಕ 9:37-43)
14 ಯೇಸು ಮತ್ತು ಆತನ ಶಿಷ್ಯರು ಜನರ ಬಳಿಗೆ ಹಿಂತಿರುಗಿ ಹೋದರು. ಒಬ್ಬನು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, 15 “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ. 16 ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
17 ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು. 18 ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.
19 ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು.
20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು. 21 [a]
Kannada Holy Bible: Easy-to-Read Version. All rights reserved. © 1997 Bible League International