Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
Error: 'ಬಾರೂಕನು 5 ' not found for the version: Kannada Holy Bible: Easy-to-Read Version
ಮಲಾಕಿ 3:1-4

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.

“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು. ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು. ಜೆರುಸಲೇಮಿನಿಂದಲೂ ಯೆಹೂದದಿಂದಲೂ ಯೆಹೋವನು ಕಾಣಿಕೆಗಳನ್ನು ಸ್ವೀಕರಿಸುವನು. ಹಿಂದಿನ ಕಾಲದಲ್ಲಿದ್ದಂತೆಯೇ ಈಗಲೂ ಆಗುವದು. ಬಹಳ ವರ್ಷಗಳ ಹಿಂದಿನ ಕಥೆಯೇ ಈಗಲೂ ಆಗುವದು.

ಲೂಕ 1:68-79

68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ.
    ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.
69 ತನ್ನ ಸೇವಕನಾದ ದಾವೀದನ ಮನೆತನದಿಂದ
    ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.
70 ಇದನ್ನು ಆತನು ಪೂರ್ವಕಾಲದ
    ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ.
71 ದೇವರು ನಮ್ಮನ್ನು ನಮ್ಮ ವೈರಿಗಳಿಂದಲೂ
    ದ್ವೇಷಿಗಳ ಹಿಡಿತದಿಂದಲೂ ರಕ್ಷಿಸಿದ್ದಾನೆ.
72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ
    ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ.
73 ನಮ್ಮ ವೈರಿಗಳ ಹಿಡಿತದಿಂದ ನಮ್ಮನ್ನು ಬಿಡಿಸುವುದಾಗಿ ದೇವರು ನಮ್ಮ ಪಿತೃವಾದ ಅಬ್ರಹಾಮನಿಗೆ ವಾಗ್ದಾನ ಮಾಡಿದ್ದಾನೆ.
74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು
    ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.

76 “ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ.
    ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.
77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.

78 “ನಮ್ಮ ದೇವರ ಮಹಾಕರುಣೆಯಿಂದ
    ಪರಲೋಕದಿಂದ ಹೊಸ ದಿನವೊಂದು ನಮಗಾಗಿ ಉದಯಿಸುವುದು.
79 ಅಂಧಕಾರದಲ್ಲಿ ಜೀವಿಸುತ್ತಾ ಮರಣಭಯದಲ್ಲಿರುವ ಜನರಿಗೆ ದೇವರು ಸಹಾಯ ಮಾಡುವನು.
ಆತನು ನಮ್ಮನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವನು.”

ಫಿಲಿಪ್ಪಿಯವರಿಗೆ 1:3-11

ಪೌಲನ ಪ್ರಾರ್ಥನೆ

ನಾನು ನಿಮ್ಮನ್ನು ಜ್ಞಾಪಿಸಿಕೊಂಡಾಗಲೆಲ್ಲಾ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ನಿಮ್ಮೆಲ್ಲರಿಗಾಗಿ ಯಾವಾಗಲೂ ಆನಂದದಿಂದ ಪ್ರಾರ್ಥಿಸುತ್ತೇನೆ. ನನ್ನ ಸುವಾರ್ತಾಸೇವೆಯಲ್ಲಿ ನೀವು ಪಾಲುಗಾರರಾದ ಕಾರಣ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನೀವು ನಂಬಿಕೊಂಡಂದಿನಿಂದ ಇಲ್ಲಿಯವರೆಗೂ ನನಗೆ ಸಹಾಯ ಮಾಡಿದಿರಿ. ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.

ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ. ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.

ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ:

ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು. 10 ಒಳಿತುಕೆಡಕುಗಳಿಗಿರುವ ವ್ಯತ್ಯಾಸವನ್ನು ಅರಿತುಕೊಂಡು ಒಳ್ಳೆಯದನ್ನೇ ಆರಿಸಿಕೊಳ್ಳುವಂಥವರಾಗಬೇಕು; ಕ್ರಿಸ್ತನ ಬರುವಿಕೆಯಲ್ಲಿ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕು. 11 ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.

ಲೂಕ 3:1-6

ಯೋಹಾನನ ಬೋಧನೆ

(ಮತ್ತಾಯ 3:1-12; ಮಾರ್ಕ 1:1-8; ಯೋಹಾನ 1:19-28)

ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು.

ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ

ಹೆರೋದನು ಗಲಿಲಾಯಕ್ಕೂ

ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ

ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.

ಅನ್ನನು ಮತ್ತು ಕಾಯಫನು ಮಹಾಯಾಜಕರಾಗಿದ್ದರು.[a] ಆ ಸಮಯದಲ್ಲಿ ಜಕರೀಯನ ಮಗನಾದ ಯೋಹಾನನಿಗೆ ದೇವರಿಂದ ಆಜ್ಞೆಯೊಂದು ಬಂತು. ಯೋಹಾನನು ಗುಡ್ಡಗಾಡಿನಲ್ಲಿ ವಾಸವಾಗಿದ್ದನು. ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು. ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ:

“‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ.
    ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.
ಪ್ರತಿಯೊಂದು ಕಣಿವೆಯು ಮುಚ್ಚಲ್ಪಡುವವು.
    ಪ್ರತಿಯೊಂದು ಬೆಟ್ಟಗುಡ್ಡಗಳು ಸಮನಾಗಿ ಮಾಡಲ್ಪಡುವವು.
ಡೊಂಕಾದ ದಾರಿಗಳು ನೀಟಾಗುವವು.
    ಕೊರಕಲಾದ ದಾರಿಗಳು ಸಮವಾಗುವವು.
ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’
ಎಂಬುದಾಗಿ ಅಡವಿಯಲ್ಲಿ ಒಬ್ಬನು ಕೂಗುತ್ತಿದ್ದಾನೆ.”(A)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International