Revised Common Lectionary (Semicontinuous)
ರಚನೆಗಾರ: ದಾವೀದ.
8 ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು.
ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.
2 ಚಿಕ್ಕಮಕ್ಕಳ ಬಾಯಿಗಳೂ ಕೂಸುಗಳ ಬಾಯಿಗಳೂ ನಿನ್ನನ್ನು ಸ್ತುತಿಸಿ ಕೊಂಡಾಡುತ್ತವೆ;
ನಿನ್ನ ವೈರಿಗಳ ಬಾಯಿ ಮುಚ್ಚಿಸುವುದಕ್ಕಾಗಿಯೇ ನೀನು ಹೀಗೆ ಮಾಡಿರುವೆ.
3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ
ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.
4 ಮನುಷ್ಯರಿಗೆ ನೀನೇಕೆ ಪ್ರಾಮುಖ್ಯತೆ ಕೊಡಬೇಕು?
ನೀನೇಕೆ ಅವರನ್ನು ಜ್ಞಾಪಿಸಿಕೊಳ್ಳಬೇಕು?
ಮನುಷ್ಯರು ಎಷ್ಟರವರು?
ನೀನೇಕೆ ಅವರನ್ನು ಗಣನೆಗೆ ತೆಗೆದುಕೊಳ್ಳಬೇಕು?
5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ.
ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ.
ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.
6 ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ.
ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.
7 ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.
8 ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ
ದೊರೆತನ ಮಾಡುವರು.
9 ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.
13 ಜ್ಞಾನವನ್ನು ಕಂಡುಕೊಂಡು ವಿವೇಕವನ್ನು ಸಂಪಾದಿಸಿಕೊಳ್ಳುವವನೇ ಭಾಗ್ಯವಂತನು. 14 ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆದಾಯವು ಬಂಗಾರಕ್ಕಿಂತಲೂ ಅಧಿಕ. 15 ಜ್ಞಾನವು ರತ್ನಕ್ಕಿಂತಲೂ ಅಮೂಲ್ಯವಾದದ್ದು. ನಿನ್ನ ಇಷ್ಟ ವಸ್ತುಗಳಲ್ಲಿ ಯಾವುದೂ ಅದಕ್ಕೆ ಸಮವಿಲ್ಲ.
16 ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು. 17 ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ. 18 ಜ್ಞಾನವು ತನ್ನನ್ನು ಅವಲಂಬಿಸಿಕೊಳ್ಳುವವರಿಗೆ ಜೀವದಾಯಕ ಮರದಂತಿದೆ. ಅದನ್ನು ಹೊಂದಿರುವವರು ಧನ್ಯರಾಗಿದ್ದಾರೆ.
17 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.
18 ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ. 19 ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.
Kannada Holy Bible: Easy-to-Read Version. All rights reserved. © 1997 Bible League International