Revised Common Lectionary (Semicontinuous)
ರಚನೆಗಾರ: ಆಸಾಫ.
77 ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು.
ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.
2 ನನ್ನ ಯೆಹೋವನೇ, ಇಕ್ಕಟ್ಟಿನಲ್ಲಿ ನಿನ್ನನ್ನು ಕರೆದೆನು;
ರಾತ್ರಿಯೆಲ್ಲಾ ನಿನಗಾಗಿ ಕೈಚಾಚಿಕೊಂಡಿದ್ದೆನು.
ಆದರೆ ನನ್ನ ಮನಸ್ಸು ಸಮಾಧಾನಗೊಳ್ಳಲಿಲ್ಲ.
11 ಯೆಹೋವನೇ, ನಿನ್ನ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
ಬಹುಕಾಲದ ಹಿಂದೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಿಸಿಕೊಳ್ಳುವೆನು.
12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;
ನಿನ್ನ ಕಾರ್ಯಗಳ ಕುರಿತಾಗಿ ಆಲೋಚಿಸುವೆನು.
13 ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ.
ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ.
14 ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ.
ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.
15 ನೀನು ನಿನ್ನ ಶಕ್ತಿಯಿಂದ ನಿನ್ನ ಜನರನ್ನು ರಕ್ಷಿಸಿದೆ.
ಯಾಕೋಬನ ಮತ್ತು ಯೋಸೇಫನ ಸಂತತಿಯವರನ್ನು ನೀನು ರಕ್ಷಿಸಿದೆ.
16 ದೇವರೇ, ನಿನ್ನನ್ನು ಕಂಡು ಜಲರಾಶಿಗಳು ಭಯಗೊಂಡವು.
ಆಳವಾದ ಜಲರಾಶಿಗಳು ಭಯದಿಂದ ನಡುಗಿದವು.
17 ದಟ್ಟವಾದ ಕಪ್ಪುಮೋಡಗಳು ಮಳೆಗರೆದವು.
ಜನರಿಗೆ ಮೇಘಮಂಡಲದಿಂದ ಗುಡುಗು ಕೇಳಿಸಿತು.
ನಿನ್ನ ಮಿಂಚಿನ ಬಾಣಗಳು ಆ ಮೋಡಗಳಲ್ಲಿ ಹಾರಿದವು.
18 ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು.
ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು.
ಭೂಮಿಯು ಅಲ್ಲಾಡಿ ಕಂಪಿಸಿತು.
19 ನೀನು ಸಮುದ್ರದಲ್ಲಿ ಮಾರ್ಗಮಾಡಿದೆ;
ಆಳವಾದ ಜಲರಾಶಿಗಳನ್ನು ದಾಟಿದೆ.
ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.
20 ಕುರುಬನು ಕುರಿಹಿಂಡನ್ನು ಕರೆದೊಯ್ಯುವಂತೆ
ನಿನ್ನ ಜನರನ್ನು ಕರೆದೊಯ್ಯಲು ಮೋಶೆಯನ್ನೂ ಆರೋನನನ್ನೂ ಉಪಯೋಗಿಸಿದೆ.
13 ಅಹಜ್ಯನು ಮೂರನೆಯ ಸೇನಾಧಿಪತಿಯನ್ನು ಐವತ್ತು ಜನರೊಂದಿಗೆ ಕಳುಹಿಸಿದನು. ಐವತ್ತು ಮಂದಿಯ ಮೂರನೆಯ ಸೇನಾಧಿಪತಿಯು ಎಲೀಯನ ಬಳಿಗೆ ಬಂದನು. ಸೇನಾಧಿಪತಿಯು ತನ್ನ ಮೊಣಕಾಲುಗಳ ಮೇಲೆ ಬಿದ್ದು ನಮಸ್ಕರಿಸಿದನು. ಸೇನಾಧಿಪತಿಯು ಎಲೀಯನನ್ನು ಬೇಡಿಕೊಳ್ಳುತ್ತಾ ಅವನಿಗೆ, “ದೇವ ಮನುಷ್ಯನೇ, ನನ್ನ ಮತ್ತು ಈ ಐವತ್ತು ಜನರ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ! 14 ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.
15 ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು.
ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.
16 ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.
17 ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾಮನು ಆಳುವುದಕ್ಕೆ ಆರಂಭಿಸಿದನು.
18 ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
3 ಬೇತೇಲಿನಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು, ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು.
ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.
4 ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು, ಏಕೆಂದರೆ ಯೆಹೋವನು ಜೆರಿಕೊವಿಗೆ ಹೋಗುವಂತೆ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ!” ಎಂದು ಹೇಳಿದನು. ಇಬ್ಬರೂ ಜೆರಿಕೊವಿಗೆ ಹೋದರು.
5 ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವನು ಈ ದಿನ ನಿನ್ನ ಒಡೆಯನನ್ನು ನಿನ್ನಿಂದ ತೆಗೆದುಕೊಳ್ಳುತ್ತಾನೆಂಬುದು ನಿನಗೆ ತಿಳಿದಿದೆಯೇ?” ಎಂದು ಕೇಳಿದರು.
ಎಲೀಷನು, “ಹೌದು, ನನಗೆ ಅದು ತಿಳಿದಿದೆ. ಅದರ ಬಗ್ಗೆ ಮಾತನಾಡಬೇಡಿ” ಎಂದನು.
21 ಈ ವಿಷಯವನ್ನು ಯಾರಿಗೂ ಹೇಳಬಾರದೆಂದು ಯೇಸು ಅವರನ್ನು ಎಚ್ಚರಿಸಿದನು.
ಯೇಸು ತನ್ನ ಮರಣದ ಕುರಿತು ಮುಂತಿಳಿಸಿದ್ದು
(ಮತ್ತಾಯ 16:21-28; ಮಾರ್ಕ 8:31–9:1)
22 ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
23 ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ಪ್ರತಿದಿನ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 24 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗೋಸ್ಕರ ತನ್ನ ಜೀವವನ್ನು ಕೊಡುವವನು ಅದನ್ನು ಉಳಿಸಿಕೊಳ್ಳುವನು. 25 ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು? 26 ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು. 27 ನಾನು ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ಕೆಲವರು ತಾವು ಸಾಯುವುದಕ್ಕಿಂತ ಮೊದಲು ದೇವರ ರಾಜ್ಯವನ್ನು ನೋಡುವರು” ಎಂದು ಹೇಳಿದನು.
Kannada Holy Bible: Easy-to-Read Version. All rights reserved. © 1997 Bible League International