Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 15

ರಚನೆಗಾರ: ದಾವೀದ.

15 ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು?
    ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ
    ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ
    ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
ಅವನು ದೇವದೂಷಕರನ್ನು ತಿರಸ್ಕರಿಸುವವನೂ
    ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ
ತನಗೆ ತೊಂದರೆಯಾದರೂ
    ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ
    ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು.
ಹೀಗೆ ಜೀವಿಸುವವನು
    ದೇವರಿಗೆ ಸಮೀಪವಾಗಿಯೇ ಇರುತ್ತಾನೆ.[a]

ಧರ್ಮೋಪದೇಶಕಾಂಡ 16:18-20

ನ್ಯಾಯಾಧಿಪತಿಗಳೂ ಅಧಿಕಾರಿಗಳೂ

18 “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು. 19 ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು. 20 ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.

1 ಪೇತ್ರನು 3:8-12

ಒಳ್ಳೆಯದರ ನಿಮಿತ್ತ ಉಂಟಾಗುವ ಸಂಕಟ

ಆದ್ದರಿಂದ ನೀವೆಲ್ಲರೂ ಒಟ್ಟಾಗಿ ಶಾಂತಿಯಿಂದ ಬಾಳಿರಿ; ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿರಿ. ಒಬ್ಬರನ್ನೊಬ್ಬರು ಸಹೋದರರಂತೆ ಪ್ರೀತಿಸಿರಿ. ದಯೆ ತೋರುವವರೂ ಮತ್ತು ದೀನತೆ ಉಳ್ಳವರೂ ಆಗಿರಿ. ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ. 10 ಪವಿತ್ರ ಗ್ರಂಥವು ಹೇಳುವುದೇನೆಂದರೆ,

“ಈ ಜೀವಿತದಲ್ಲಿ ಸಂತೋಷಿಸುತ್ತಾ
    ಸುದಿನಗಳನ್ನು ನೋಡಲು ಅಪೇಕ್ಷಿಸುವವನು
ಕೆಟ್ಟ ಮಾತುಗಳನ್ನಾಡದಿರಲಿ;
    ಸುಳ್ಳನ್ನು ನುಡಿಯದಿರಲಿ.
11 ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ.
    ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.
12 ನೀತಿವಂತರನ್ನು ಪ್ರಭುವು ಕಾಯುತ್ತಾನೆ;
    ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ.
ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”(A)

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International